Skip to content
The Believer's Library

Biblica® Open Kannada Contemporary Version 2022

Genesis 5 OKCV

Show OKCV only
Verse × ×
1 This is the written record of Adam's descendants. When our Father created humankind, he made them in the likeness of God. ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.
2 He created them male and female, blessed them, and named them Humankind when they were created. ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.
3 At 130, Adam fathered a son in his likeness, after his image, and named him Seth. ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.
4 After he fathered Seth, Adam lived 800 years and had other sons and daughters. ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರು ವರುಷ ಬದುಕಿದನು.
5 Altogether, Adam lived 930 years, and then he died. ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.
6 When Seth had lived 105 years, he fathered Enosh. ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.
7 After he fathered Enosh, Seth lived 807 years and had other sons and daughters. ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.
8 Altogether, Seth lived 912 years, and then he died. ಸೇತನು ಒಟ್ಟು ಒಂಬೈನೂರ ಹನ್ನೆರಡು ವರ್ಷ ಬದುಕಿ ಸತ್ತನು.
9 When Enosh had lived ninety years, he fathered Kenan. ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು.
10 After he fathered Kenan, Enosh lived 815 years and had other sons and daughters. ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.
11 Altogether, Enosh lived 905 years, and then he died. ಅವನು ಒಟ್ಟು ಒಂಬೈನೂರ ಐದು ವರುಷ ಬದುಕಿ ಸತ್ತನು.
12 When Kenan had lived seventy years, he fathered Mahalalel. ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು.
13 After he fathered Mahalalel, Kenan lived 840 years and had other sons and daughters. ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.
14 Altogether, Kenan lived 910 years, and then he died. ಕೇನಾನನು ಒಟ್ಟು ಒಂಬೈನೂರ ಹತ್ತು ವರ್ಷ ಬದುಕಿ ಸತ್ತನು.
15 When Mahalalel had lived sixty-five years, he fathered Jared. ಮಹಲಲೇಲನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಯೆರೆದನು ಹುಟ್ಟಿದನು.
16 After he fathered Jared, Mahalalel lived 830 years and had other sons and daughters. ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಬದುಕಿ ಗಂಡು, ಹೆಣ್ಣು ಮಕ್ಕಳನ್ನು ಪಡೆದನು.
17 Altogether, Mahalalel lived 895 years, and then he died. ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು.
18 When Jared had lived 162 years, he fathered Enoch. ಯೆರೆದನು ನೂರ ಅರವತ್ತೆರಡು ವರುಷದವನಾಗಿದ್ದಾಗ, ಅವನಿಂದ ಹನೋಕನು ಹುಟ್ಟಿದನು.
19 After he fathered Enoch, Jared lived 800 years and had other sons and daughters. ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
20 Altogether, Jared lived 962 years, and then he died. ಯೆರೆದನು ಒಟ್ಟು ಒಂಬೈನೂರ ಅರವತ್ತೆರಡು ವರ್ಷ ಬದುಕಿ, ತರುವಾಯ ಸತ್ತನು.
21 When Enoch had lived sixty-five years, he fathered Methuselah. ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.
22 After fathering Methuselah, Enoch walked with our Father 300 years, and had other sons and daughters. ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
23 Altogether, Enoch lived 365 years. ಹನೋಕನು ಒಟ್ಟು ಮುನ್ನೂರ ಅರವತ್ತೈದು ವರ್ಷ ಬದುಕಿದನು.
24 Enoch walked faithfully with our Father; then he was gone, because our Father took him. ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.
25 When Methuselah had lived 187 years, he fathered Lamech. ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು.
26 After he fathered Lamech, Methuselah lived 782 years and had other sons and daughters. ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.
27 Altogether, Methuselah lived 969 years, and then he died. ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.
28 When Lamech had lived 182 years, he fathered a son. ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.
29 He named him Noah, saying, "He will comfort us in our work and painful toil of our hands, from the ground our Father cursed." ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.
30 After he fathered Noah, Lamech lived 595 years and had other sons and daughters. ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.
31 Altogether, Lamech lived 777 years, and then he died. ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು.
32 When Noah was 500 years old, he fathered Shem, Ham, and Japheth. ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]