Skip to content
The Believer's Library

Biblica® Open Kannada Contemporary Version 2022

Genesis 8 OKCV

Show OKCV only
Verse × ×
1 But our Father remembered Noah, all the living creatures, and all the livestock with him in the ark, and swept a wind over the earth so the waters began to recede. ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.
2 The springs of the deep and heaven's floodgates closed, and rain from the sky stopped. ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.
3 Water kept receding from the earth, and after 150 days it had gone down. ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.
4 The ark rested on the mountains of Ararat on the seventeenth day of the seventh month. ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.
5 The waters kept receding until the tenth month; on its first day, the mountaintops appeared. ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
6 After forty days, Noah opened the window he had made in the ark, ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.
7 he sent out a raven, and it flew back and forth until the waters dried up from the earth. ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.
8 Then he released the dove from him to see if the waters had subsided from the ground's surface. ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.
9 But the dove found no resting place for her foot and returned to him in the ark, since water still covered the whole earth's surface. So he reached out his hand, took her, and brought her back into the ark. ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
10 He waited seven more days and again sent out the dove from the ark. ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.
11 The dove returned to him that evening with a freshly plucked olive leaf in her beak, so Noah knew the waters had receded from the earth. ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.
12 He waited seven more days, then sent the dove out again; it did not return to him again. ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.
13 In Noah's 600 and first year, the first day of the first month, the waters had dried up from the earth. Noah removed the ark's covering, looked out, and saw the ground's surface was dry. ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು.
14 By the twenty-seventh day of the second month the earth was completely dry. ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
15 Then our Father said to Noah, ಆಗ ದೇವರು ನೋಹನಿಗೆ,
16 "Leave the ark: you and your wife and your sons and your sons' wives with you. “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.
17 Bring out with you every living creature—all flesh: birds, animals, everything that crawls on the ground—so they may swarm across the earth, be fruitful, and multiply on the earth." ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.
18 So Noah came out, together with his sons and his wife and his sons' wives. ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು.
19 Every animal, every crawling thing, every bird—everything that moves on the earth—left the ark by their kinds. ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.
20 Noah built an altar to our Father, took some of every clean animal and every clean bird, and offered burnt offerings on it. ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
21 Our Father smelled the pleasing aroma and said in his heart, "I will never again curse the ground because of humanity, though the human heart's inclination is evil from youth, nor will I ever again strike down every living thing as I have done. ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.
22 As long as the earth endures, seedtime and harvest, cold and heat, summer and winter, day and night will never cease." “ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]