Skip to content
The Believer's Library

Biblica® Open Kannada Contemporary Version 2022

Genesis 9 OKCV

Show OKCV only
Verse × ×
1 Then our Father blessed Noah and his sons, saying, "Be fruitful and multiply and fill the earth. ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
2 Every animal of the earth, every bird of the sky, everything that crawls on the ground, and every fish of the sea will fear and dread you; they are given into your hand. ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.
3 Every living, moving thing will be your food. As I gave you the green plants, I now give you everything. ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
4 But you must not eat meat that still has its lifeblood in it. “ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.
5 I will surely demand an accounting for your blood: from every animal I will demand it, and from every person—each for his brother's life—I will demand a human life. ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.
6 Whoever sheds human blood, by humans will their blood be shed; for in the image of God, humanity was made. “ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.
7 As for you, be fruitful and multiply; swarm across the earth and multiply on it." ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.
8 Then our Father said to Noah and to his sons with him: ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ,
9 "As for me, I am now establishing my covenant with you and with your descendants after you, “ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ
10 and every living creature with you—birds, livestock, every wild animal of the earth—all that came out of the ark with you, every living thing of the earth. ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ
11 I set my covenant with you: never again will all flesh be cut off by floodwaters; never again a flood to destroy the earth." ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”
12 Then our Father said, "This is the sign of the covenant I'm making between me and you and every living creature with you, for all generations to come: ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:
13 I have put my rainbow in the clouds as the sign of the covenant between me and the earth. ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
14 Whenever I bring clouds over the earth and the rainbow appears in the clouds, ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.
15 I will remember my covenant between me and you and every living creature of every kind: never again will floodwaters destroy all life. ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.
16 When the rainbow is in the clouds, I will see it and remember the everlasting covenant between me and every living creature of every kind on earth." ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”
17 So our Father told Noah, "This is the sign of the covenant I've established between me and all life on earth." ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು.
18 Noah's sons who left the ark: Shem, Ham, and Japheth. (Ham was Canaan's father.). ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
19 These three were the sons of Noah, and from them the whole earth was populated. ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.
20 Noah, a man of the soil, was the first to plant a vineyard. ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.
21 When he drank some of its wine, he became drunk and lay uncovered inside his tent. ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.
22 Ham, the father of Canaan, saw his father naked and told his two brothers outside. ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.
23 Shem and Japheth took a cloak, laid it on both their shoulders, walked in backward, and covered their father's nakedness; their faces were backward, so they did not see their father's nakedness. ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
24 When Noah awoke from his wine and learned what his youngest son had done to him, ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು, ತನ್ನ ಕಿರಿಯ ಮಗನು ತನಗೆ ಮಾಡಿದ್ದನ್ನು ತಿಳಿದನು.
25 he said, "Cursed be Canaan! He will be the lowest of servants to his brothers." ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”
26 He also said, "Blessed be the Father of Shem; may Canaan be Shem's servant. ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.
27 May our Father extend Japheth's territory; may Japheth dwell in the tents of Shem, and may Canaan be Shem's servant." ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”
28 After the flood Noah lived 350 years. ಪ್ರಳಯವಾದ ಮೇಲೆ ನೋಹನು ಮುನ್ನೂರ ಐವತ್ತು ವರ್ಷ ಬದುಕಿದನು.
29 Noah lived a total of 950 years, and then he died. ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]