Skip to content
The Believer's Library

Biblica® Open Kannada Contemporary Version 2022

Hebrews 1 OKCV

Show OKCV only
Verse × ×
1 Long ago, in many times and many ways, our Heavenly Father spoke to our ancestors through the prophets. ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,
2 But in these final days he spoke to us by his Son, whom he appointed heir of all things and through whom he made the universe. ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.
3 The Son is the brightness of our Father's glory, the exact image of his being, sustaining all things by his powerful word. After purifying sins, he sat down at the right hand of the Majesty on high. ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
4 He became as much greater than angels as his inherited name is greater than theirs. ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
5 For to which of the angels did our Father ever say, "You are my Son; today I have become your Father"? Or again, "I will be his Father, and he will be my Son"? ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”
6 And again, when he brings the firstborn into the world, he says, "Let all my angels worship him. ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.
7 Of the angels he says, "He makes his angels winds, and his servants flames of fire." ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.
8 But about the Son he says, "Your throne, O God, is forever and ever, and the scepter of righteousness is the scepter of your kingdom. ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.
9 You have loved righteousness and hated wickedness; therefore our Father, your Father, has anointed you with the oil of gladness above your companions." ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”
10 And, "In the beginning, Lord, you laid the foundations of the earth, and the heavens are the work of your hands. ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
11 They will perish, but you remain; they will all wear out like a garment. ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
12 You will roll them up like a robe; like a garment they will be changed. But you are the same, and your years will never end." ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”
13 But to which of the angels did our Father ever say, "Sit at my right hand until I make your enemies a footstool for your feet"?" ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?
14 Aren't all angels ministering spirits, sent to serve those about to inherit salvation? ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]