Skip to content
The Believer's Library

Biblica® Open Kannada Contemporary Version 2022

Hebrews 2 OKCV

Show OKCV only
Verse × ×
1 So we must pay closer attention to what we've heard, or we may drift away. ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.
2 For if the word spoken through angels held firm, and every wrongdoing and disobedience got just payment, ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.
3 how will we escape if we neglect so great a salvation? First announced by the Lord, it was confirmed to us by those who heard him, ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.
4 while our Father also testified with them through signs, wonders, various miracles, and distributions of the Holy Spirit, according to his will. ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.
5 For it was not to angels that our Father subjected the coming world we're speaking of. ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.
6 Someone has testified somewhere, "What is man, that you are mindful of him, or the son of man, that you care for him? ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?
7 You made him for a little while lower than the angels; you crowned him with glory and honor, ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.
8 putting everything in subjection under his feet." Now in subjecting everything to him, our Father left nothing outside his control. At present, however, we do not yet see everything subjected to Christ. ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.
9 But we see Jesus, made lower than the angels for a little while, now crowned with glory and honor because he suffered death, so that by our Father's grace he might taste death for everyone. ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.
10 It was fitting that our Father, for whom and through whom all things exist, should perfect the pioneer of their salvation through suffering, bringing many sons to glory. ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.
11 The one who makes holy and those made holy all come from one Father. That's why he isn't ashamed to call them brothers and sisters, ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,
12 saying, "I will proclaim your name to my brothers and sisters; I will sing your praise amid the assembly." ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”
13 And again, "I will trust in him." And again, "Here am I, and the children our Father gave me." ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.
14 Since the children share flesh and blood, he too shared them, so that through death he might destroy the one holding the power of death—the devil, ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ
15 and free all those who, through fear of death, were enslaved their whole lives. ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
16 For surely it is not angels he helps, but the descendants of Abraham. ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು.
17 So he had to become like his brothers and sisters in every way, to be a merciful and faithful high priest serving our Father, clearing away the people's sins. ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.
18 Since he himself suffered when tempted, he can help those being tempted. ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]