Skip to content
The Believer's Library

Biblica® Open Kannada Contemporary Version 2022

Hebrews 3 OKCV

Show OKCV only
Verse × ×
1 So, holy brothers sharing a heavenly call, consider Jesus, the apostle and high priest we confess. ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.
2 He was faithful to the one who appointed him, as Moses also was in all our Father's house. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.
3 Jesus deserves far more glory than Moses, as a house's builder deserves more honor than the house itself. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.
4 For every house is built by someone, but the builder of all things is our Father. ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ.
5 Moses was faithful in all our Father's house, a servant testifying to what would be spoken later. “ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.
6 But Christ, as son, is faithful over his house. And we are his house—if we hold firm the confidence and hope we boast in. ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
7 So, as the Holy Spirit says: "Today, if you hear his voice, ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
8 do not harden your hearts as you did in the rebellion, on the day of testing in the wilderness, ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.
9 where your ancestors put me to the test and saw my works for forty years. ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು.
10 That is why I was angry with that generation, and I said, 'Their hearts are always going astray, and they have not known my ways.' ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’
11 So I swore in my anger, 'They will never enter my rest.'" ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”
12 Brothers, watch that none of you has an evil, unbelieving heart that deserts the living Father. ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.
13 But encourage each other daily, while it is called "today," so none of you becomes hardened by sin's deceit. ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
14 For we have become sharers in Christ, if we truly keep our first confidence firm to the end. ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!
15 As it is said: "Today, if you hear his voice, do not harden your hearts as when you rebelled." ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”
16 Who heard and rebelled? Wasn't it all who left Egypt through Moses? “ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?
17 With whom was he angry forty years? Was it not with those who sinned, whose bodies fell in the wilderness? ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
18 Who did he swear would never enter his rest, except those who disobeyed? ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?
19 So we see they couldn't enter because of lack of faith. ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]