Skip to content
The Believer's Library

Biblica® Open Kannada Contemporary Version 2022

Hebrews 4 OKCV

Show OKCV only
Verse × ×
1 Since the promise to enter his rest still stands, let us be careful that none of you seems to have missed it. ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.
2 We too had good news preached to us, as they did. But the message heard didn't benefit them, since they didn't combine it with faith, as those who listened did. ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.
3 We who believed enter that rest, as he said: "In my wrath I swore, they will never enter my rest." Yet his works were finished since the foundation of the world. ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.
4 For somewhere he says of the seventh day: "And our Father rested on the seventh day from all his works." ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,
5 And again in the same passage he says, "They will never enter my rest." ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ.
6 Since it remains that some enter it, and those first given the good news failed to enter through their disobedience, ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.
7 so again he sets a day, "Today," speaking through David much later, as already said: "Today, if you hear his voice, do not harden your hearts." ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”
8 For if Joshua had given them rest, our Father would not have spoken later about another day. ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.
9 So then, there remains a Sabbath rest for the people of our Father. ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.
10 Whoever has entered our Father's rest has also rested from his works, as our Father did from his own. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.
11 So let's strive to enter that rest, so no one falls by the same pattern of disobedience. ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.
12 For the word of our Father is alive and active, sharper than any two-edged sword, piercing to divide soul and spirit, joints and marrow, discerning the heart's thoughts and intentions. ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
13 No creature is hidden from his sight; all lies naked and exposed to the eyes of the one we must answer to. ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.
14 So since we have a great high priest who has passed through the heavens—Jesus, Son of our Father—let's hold firmly to the faith we profess. ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.
15 We have no high priest unable to sympathize with our weaknesses, but one tested in every way as we are, yet without sin. ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.
16 Let us then approach the throne of grace boldly, so we may receive mercy and find grace to help us in time of need. ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]