Skip to content
The Believer's Library

Biblica® Open Kannada Contemporary Version 2022

Hebrews 5 OKCV

Show OKCV only
Verse × ×
1 Every high priest taken from among men is appointed for men in matters relating to our Father, to offer gifts and sacrifices for sins. ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.
2 He can deal gently with the ignorant and straying, since he himself also is subject to weakness. ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.
3 Because of this weakness, he must offer sacrifices for sins—for the people as much as for himself. ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.
4 No one takes this honor for himself, but only when called by our Father, as Aaron was. ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.
5 So also Christ did not glorify himself to become high priest, but the one who said to him: "You are my Son; today I have fathered you." ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.
6 Just as he also says elsewhere, "You are a priest forever, after the order of Melchizedek." ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.
7 During his earthly life, Jesus offered prayers and pleas—with loud cries and tears—to the one able to save him from death, and was heard for his godly fear. ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.
8 Although he was a Son, he learned obedience from what he suffered. ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.
9 And having been made perfect, he became the source of eternal salvation to all who obey him, ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
10 having been appointed by our Father as a high priest after the order of Melchizedek. ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.
11 We have much to say about this, hard to explain, since your hearing has grown dull. ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
12 For though you should be teachers by now, you need someone to teach you the basics of our Father's word again. You've come to need milk, not solid food. ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13 Everyone living on milk lacks skill in the word of righteousness, since he's an infant. ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.
14 But solid food is for the mature, whose senses are trained by practice to distinguish good from evil. ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]