Skip to content
The Believer's Library

Biblica® Open Kannada Contemporary Version 2022

Hebrews 7 OKCV

Show OKCV only
Verse × ×
1 This Melchizedek, king of Salem, priest of the Most High, our Father, met Abraham returning from defeating the kings and blessed him. ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.
2 Abraham gave him a tenth of everything. His name means, first, king of righteousness, then also king of Salem—meaning king of peace. ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.
3 Without father, without mother, without genealogy, no beginning of days or end of life, but like the Son of our Father, he remains a priest forever. ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.
4 Consider how great this man was: Abraham the patriarch gave him a tenth of the plunder. ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.
5 Those descendants of Levi who become priests are commanded by the law to collect the tenth from the people—their own brothers—though they too descend from Abraham. ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.
6 But he, though not descended from them, took a tenth from Abraham and blessed the one who held the promises. ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು.
7 It is beyond all dispute that the lesser is blessed by the greater. ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.
8 In one case, tithes are received by mortal men; in the other, by one testified to be alive. ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.
9 One might even say Levi, who receives the tenth, paid it through Abraham, ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.
10 for he was still in his ancestor's body when Melchizedek met Abraham. ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.
11 If the Levitical priesthood brought perfection—the people received the law under it—why was another priest needed, one in Melchizedek's order, not called after Aaron's order? ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?
12 For when the priesthood changes, the law must change as well. ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.
13 For he of whom these things are said belonged to another tribe, from which no one has ever served at the altar. ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ.
14 Clearly our Lord descended from Judah; Moses said nothing about priests from that tribe. ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.
15 And this becomes even more evident when another priest arises in the likeness of Melchizedek, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
16 who has become a priest not by a law of physical descent but by the power of an indestructible life. ಕ್ರಿಸ್ತ ಯೇಸು ಯಾಜಕರಾದುದು ಅಳಿವಿಲ್ಲದ ಜೀವದ ಶಕ್ತಿಗೆ ಅನುಸಾರವಾಗಿದೆಯೇ ಹೊರತು ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.
17 For it is testified about him, "You are a priest forever, in the order of Melchizedek." ಕರ್ತ ಯೇಸುವಿನ ವಿಷಯದಲ್ಲಿ, “ನೀನು ಸದಾಕಾಲವೂ, ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,” ಎಂಬ ಸಾಕ್ಷಿಯಿದೆ.
18 On the one hand, a former commandment is set aside because of its weakness and uselessness. ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
19 The law perfected nothing; but a better hope is introduced, through which we draw near to our Father. ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.
20 This was not without an oath, for the others became priests without an oath, ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು,
21 but he became a priest with an oath, by the one who said to him: "Our Father has sworn and will not change his mind, 'You are a priest forever.'" ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”
22 To that same degree, Jesus has become the guarantor of a better covenant. ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.
23 The former priests were many, because death prevented them from continuing in office, ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.
24 but he holds his priesthood permanently, because he continues forever. ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.
25 So he can fully save those who come to our Father through him, since he always lives to plead their case. ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.
26 Such a high priest suited us: holy, blameless, unstained, separated from sinners, raised above the heavens. ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.
27 Unlike those high priests, he doesn't need to offer sacrifices daily—first for his own sins, then for the people's—since he did this once for all, offering himself. ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.
28 The law appoints weak men as high priests, but the oath's word, coming after the law, appoints the Son, made perfect forever. ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]