Skip to content
The Believer's Library

Biblica® Open Kannada Contemporary Version 2022

Hebrews 8 OKCV

Show OKCV only
Verse × ×
1 The point of this: we have such a high priest, who sat down at the right hand of the throne of the Majesty in heaven. ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.
2 A minister of the holy places and the true tabernacle, set up by the Father, not man. ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.
3 Every high priest is appointed to offer gifts and sacrifices; so this one too must have something to offer. ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.
4 If he were on earth, he wouldn't even be a priest, since others offer the gifts under the law. ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
5 They serve a copy and shadow of heavenly things, as Moses was warned when about to complete the tabernacle: "See," he said, "make everything according to the pattern shown you on the mountain." ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?
6 But now Jesus has obtained a superior ministry, since the covenant he mediates is better, established on better promises. ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.
7 For if that first covenant had been faultless, there would have been no need for a second. ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.
8 For finding fault with them, he says: "Look, the days are coming, declares our Father, when I will make a new covenant with the house of Israel and with the house of Judah. ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
9 Not like the covenant I made with their fathers on the day I took them by the hand to lead them out of the land of Egypt. For they did not remain in my covenant, and so I disregarded them, declares our Father. ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.
10 For this is the covenant I will make with the house of Israel after those days, declares our Father I will put my laws into their minds and write them on their hearts, and I will be their Father, and they will be my children. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
11 And no longer will each one teach his neighbor and each one his brother, saying, "Know our Father," for they will all know me, from the least of them to the greatest. ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.
12 For I will be merciful toward their wrongdoing, and I will remember their sins no more." ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”
13 Speaking of a new covenant, he has made the first outdated. What's outdated and aging is nearing its end. ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]