Skip to content
The Believer's Library

Biblica® Open Kannada Contemporary Version 2022

Hosea 1 OKCV

Show OKCV only
Verse × ×
1 The word of our Father that came to Hosea son of Beeri, in the days of Judah's kings Uzziah, Jotham, Ahaz, and Hezekiah, and in the days of Israel's king Jeroboam son of Joash. ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.
2 When our Father first spoke through Hosea, our Father said, "Go, take a wife of prostitution and have children of prostitution, for the land has completely abandoned me, turning to prostitution instead of following me." ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.
3 He went and took Gomer daughter of Diblaim; she conceived and bore a son. ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.
4 And our Father said to him, "Name him Jezreel, for soon I will punish the house of Jehu for the blood of Jezreel, and end the kingdom of the house of Israel. ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.
5 And on that day I will break the bow of Israel in the Valley of Jezreel." ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.
6 She conceived again and bore a daughter. And our Father said to him, "Name her Lo-Ruhamah, for I will no longer show compassion to the house of Israel, nor forgive them at all. ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.
7 But I will have mercy on the house of Judah and save them as their Father—I will not save them by bow, sword, or battle, by horses or horsemen." ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.
8 When she had weaned Lo-Ruhamah, she became pregnant and gave birth to a son. ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
9 And our Father said, "Name him Lo-Ammi, for you are not my people, and I will not be your Father." ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.
10 The children of Israel will be as countless as the sand of the sea, beyond measure or count. Where they were told, "You are not my people," they will be told, "Children of the living Father." “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
11 Judah's children and the children of Israel will gather together, appoint one head, and go up from the land, for great will be the day of Jezreel. ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]