Skip to content
The Believer's Library

Biblica® Open Kannada Contemporary Version 2022

Hosea 10 OKCV

Side by side with the Father's Heart Bible™

1ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ,ಅವನು ತನಗಾಗಿ ಫಲಫಲಿಸುತ್ತಾನೆ.ತನ್ನ ಬಹಳ ಫಲದ ಪ್ರಕಾರವಾಗಿಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ.ತನ್ನ ದೇಶದ ಅಭಿವೃದ್ಧಿಯಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.

2ಅವರ ಹೃದಯವು ವಂಚಕವಾದದ್ದು.ಈಗ ಅವರು ಅಪರಾಧಗಳನ್ನು ಹೊರಬೇಕು.ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ,ಅವರ ವಿಗ್ರಹಗಳನ್ನು ನಾಶಮಾಡುವರು.

3ಆಗ ಅವರು, “ನಮಗೆ ಅರಸನಿಲ್ಲ,ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ.ಅರಸನು ನಮಗಿದ್ದರೂಏನು ಮಾಡುವನು?” ಎಂದುಕೊಳ್ಳುತ್ತಾರೆ.

4ಅವರು ಮಾತುಗಳನ್ನಾಡಿಒಡಂಬಡಿಕೆಯನ್ನು ಮಾಡುವುದಕ್ಕೆಸುಳ್ಳು ಪ್ರಮಾಣವನ್ನು ಮಾಡುತ್ತಾರೆ.ಆದ್ದರಿಂದ ನ್ಯಾಯತೀರ್ಪುವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

5ಬೇತಾವೆನಿನ ಬಸವ ವಿಗ್ರಹಕ್ಕೆಸಮಾರ್ಯದ ನಿವಾಸಿಗಳು ಭಯಪಡುವರು.ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು.ಅದರ ಯಾಜಕರು ನಡುಗುವರು.ಏಕೆಂದರೆ ಅದರ ವೈಭವವುಅದರಿಂದ ಕುಂದಿಹೋಯಿತು.

6ಅದು ಸಹ, ಮಹಾರಾಜನಿಗೆಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು.ಎಫ್ರಾಯೀಮು ನಾಚಿಕೆಯನ್ನು ಹೊಂದುವುದು.ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.

7ಸಮಾರ್ಯ ಹಾಗು ಅದರ ಅರಸನುನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.

8ಇಸ್ರಾಯೇಲಿನ ಪಾಪಕ್ಕೆಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು.ಮುಳ್ಳುಗಿಡಗಳೂ, ಕಳೆಗಳೂಬಲಿಪೀಠಗಳ ಮೇಲೆ ಬೆಳೆಯುವುವು.ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.

9ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ.ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ.ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.

10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು.ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು,ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.

11ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ.ಅದು ತುಳಿಯುವುದನ್ನು ಇಷ್ಟಪಡುತ್ತದೆ.ಆದರೆ ನಾನು ಅದರ ಸುಂದರವಾದಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ.ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು.ಯೆಹೂದ ಉಳುವನು.ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.

12ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ.ಪ್ರೀತಿಯ ಫಲವನ್ನು ಕೊಯ್ಯಿರಿ.ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ.ಏಕೆಂದರೆ ಆತನು ಬಂದುನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂಯೆಹೋವ ದೇವರನ್ನು ಹುಡುಕುವ ಸಮಯ ಇದೇ.

13ಆದರೆ ನೀವು ದುಷ್ಟತ್ವವನ್ನು ಬಿತ್ತಿ,ಅನ್ಯಾಯವನ್ನು ಕೊಯ್ದಿರಿ,ವಂಚನೆಯ ಫಲವನ್ನು ತಿಂದಿದ್ದೀರಿ.ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.

14ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು.ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ,ನಿನ್ನ ಕೋಟೆಗಳೆಲ್ಲಾ ನಾಶವಾಗುವವು.ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ

15ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತಬೇತೇಲಿಗೆ ಸಂಭವಿಸುವುದು.ಬೆಳಗಿನ ಜಾವದಲ್ಲಿ ಇಸ್ರಾಯೇಲಿನಅರಸನು ಸಂಪೂರ್ಣವಾಗಿ ನಾಶವಾಗುವನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]