Skip to content
The Believer's Library

Biblica® Open Kannada Contemporary Version 2022

Hosea 2 OKCV

Show OKCV only
Verse × ×
1 Say to your brothers, "My People," and to your sisters, "Shown Mercy." “ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ.
2 Plead with your mother, plead—for she is not my wife, and I am not her husband—that she put away her whoring from her face and her unfaithfulness from between her breasts, “ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.
3 or I will strip her bare and leave her as naked as the day she was born; I will make her like a wilderness, turn her into a parched land, and let her die of thirst. ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.
4 I will show her children no compassion, for they are the children of whoring. ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ. ಏಕೆಂದರೆ ಅವರು ವ್ಯಭಿಚಾರದ ಮಕ್ಕಳಾಗಿದ್ದಾರೆ.
5 Their mother has prostituted herself; she who carried them acted in shame. She said, "I will chase after my lovers, who give me my bread and my water, my wool and my flax, my oil and my drink." ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.
6 Therefore I am about to block her path with thorns; I will wall her in so she cannot find her paths. ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.
7 She will chase her lovers but not catch them; she will look for them but not find them. Then she will say, "I will go back to my first husband, for it was better for me then than now." ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’
8 She has not realized that it was I who gave her the grain, the new wine, and the oil, I who lavished silver and gold on her—which they spent on Baal. ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.
9 Therefore I will take back my grain when it ripens and my new wine in its season; I will reclaim my wool and my flax, given to cover her nakedness. “ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.
10 Now I will expose her shame before the eyes of her lovers, and no one will rescue her from my hand. ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
11 I will put an end to all her rejoicing—her festivals, her New Moons, her Sabbaths, all her appointed festivals. ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
12 I will lay waste her vines and fig trees, of which she said, "These are my wages that my lovers gave me." I will turn them into a thicket, and the wild animals will devour them. ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.
13 I will hold her accountable for the days she burned offerings to the Baals, when she decked herself with rings and jewelry and chased after her lovers—but me she forgot, declares our Father. ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
14 "Therefore, look, I am going to win her back: I will lead her into the wilderness and speak tenderly to her heart. ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.
15 There I will give her back her vineyards and make the Valley of Achor a doorway of hope. There she will respond as in the days of her youth, as on the day she came up out of Egypt." ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.
16 On that day, declares our Father, you will call me "my husband," and no longer will you call me "my Baal." ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.
17 I will remove the names of the Baals from her mouth; never again will they be invoked by name. ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.
18 On that day I will make a covenant for them with the wild animals, the birds of the sky, and the creatures that move along the ground; I will banish bow and sword and war from the land, so that all may lie down in safety. ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.
19 I will betroth you to me forever; I will betroth you to me in righteousness and justice, in covenant love and compassion. ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.
20 I will betroth you to me in faithfulness, and you will know your Father. ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.
21 On that day I will respond, declares our Father—I will respond to the heavens, and they will respond to the earth; “ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.
22 and the earth will respond to the grain, the new wine, and the oil, and they will respond to Jezreel. ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.
23 I will plant her for myself in the land. I will show mercy to "No Mercy," and I will say to "Not My People," "You are my children"; and they will say, "You are my Father." ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]