Skip to content
The Believer's Library

Biblica® Open Kannada Contemporary Version 2022

Isaiah 1 OKCV

Show OKCV only
Verse × ×
1 The vision of Isaiah son of Amoz concerning Judah and Jerusalem in the days of Uzziah, Jotham, Ahaz, and Hezekiah, kings of Judah. ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.
2 Hear, heavens, and listen, earth, for our Heavenly Father has spoken: "Children I reared and brought up, but they have rebelled against me. ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
3 "The ox knows its owner, and the donkey its master's manger, but Israel does not know, my people do not understand. ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”
4 Ah, sinful nation, a people weighed down with guilt, offspring of evildoers, children who act corruptly! They have forsaken our Father, they have spurned the Holy One of Israel—our Father—they have turned their backs and walked away. ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.
5 Why will you be beaten any longer? Why do you keep on rebelling? The whole head is sick, and the whole heart is faint. ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.
6 From the sole of the foot to the top of the head there is no healthy spot—only wounds, welts, and open sores, not cleaned or bandaged or soothed with oil. ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.
7 Your land is desolate, your cities burned with fire; in your very presence foreigners devour your fields—a desolation, overthrown by strangers. ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.
8 And the daughter of Zion is left like a shelter in a vineyard, like a hut in a cucumber field, like a city under siege. ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.
9 If the Father of heaven's armies had not left us a few survivors, we would have become like Sodom, we would have been like Gomorrah. ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
10 Hear the word of our Father, you rulers of Sodom! Listen to the instruction of our Father, you people of Gomorrah! ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.
11 What are your endless sacrifices to me?" says our Father. "I have had my fill of burnt offerings of rams and the fat of fattened animals; I take no delight in the blood of bulls and lambs and goats. “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.
12 When you come to appear before me, who asked this of you—this trampling of my courts? ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.
13 Stop bringing meaningless offerings! Your incense is detestable to me. New moons, Sabbaths, the calling of assemblies—I cannot stand wickedness mixed with your solemn gatherings. ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.
14 Your new moons and your appointed feasts my soul hates; they have become a burden to me—I am weary of carrying them. ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
15 When you stretch out your hands in prayer, I will hide my eyes from you; even when you offer many prayers, I will not be listening. Your hands are full of blood. ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!
16 Wash yourselves; make yourselves clean. Take your evil deeds out of my sight; stop doing wrong. “ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.
17 Learn to do good; seek justice, set the oppressor right. Defend the orphan, stand up for the widow. ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
18 Come now, let us settle this together," says our Father. "Though your sins are like scarlet, they will be as white as snow; though they are red as crimson, they will become like wool. “ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.
19 If you are willing and obedient, you will eat the good things of the land; ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.
20 but if you refuse and rebel, you will be devoured by the sword. For the mouth of our Father has spoken." ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.
21 How the faithful city has become a prostitute! She was once full of justice; righteousness used to dwell in her—but now murderers. ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.
22 Your silver has become worthless slag, your choice wine diluted with water. ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು.
23 Your rulers are rebels, partners with thieves; they all love a bribe and chase after gifts. They do not defend the orphan, and the widow gets no hearing from them. ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.
24 Therefore this is the declaration of the Sovereign Father, the Father of heaven's armies, the Mighty One of Israel—our Father: Ah, I will get relief from my adversaries and bring justice against my foes. ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.
25 I will turn my hand against you; I will smelt away your slag as with lye and remove all your impurities. ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.
26 I will restore your judges as in days of old, your counselors as at the beginning. Afterward you will be called the City of Righteousness, the Faithful City. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”
27 Zion will be redeemed by justice, and those in her who repent, by righteousness. ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
28 But rebels and sinners will be broken together, and those who forsake our Father will be consumed. ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.
29 You will be ashamed of the sacred oaks you delighted in; you will blush over the gardens you have chosen. “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
30 For you will be like an oak whose leaves wither, like a garden without water. ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.
31 The strong man will become tinder and his work a spark; both will burn together, with no one to put them out. ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]