Skip to content
The Believer's Library

Biblica® Open Kannada Contemporary Version 2022

Isaiah 17 OKCV

Side by side with the Father's Heart Bible™

ದಮಸ್ಕಕ್ಕೆ ವಿರೋಧವಾದ ಪ್ರವಾದನೆ

1ದಮಸ್ಕದ ವಿಷಯವಾದ ಪ್ರವಾದನೆ:ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆಅದು ಹಾಳು ದಿಬ್ಬವಾಗಿರುವುದು.

2ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ,ಅವು ಯಾರ ಹೆದರಿಕೆಯೂ ಇಲ್ಲದೆಮಲಗುವ ಮಂದೆಗಳಿಗೆ ಸ್ಥಳವಾಗುವುವು.

3ಎಫ್ರಾಯೀಮಿನಿಂದ ಕೋಟೆಯೂ,ದಮಸ್ಕದ ರಾಜ್ಯಾಧಿಕಾರವೂ,ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು.ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರುಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

4ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು.ಅವರ ಕೊಬ್ಬು ಕರಗುವುದು.

5ಕೊಯ್ಯುವವನು ಪೈರನ್ನು ಕೂಡಿಸಿತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ,ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನುಕೂಡಿಸುವ ಹಾಗೆಯೂ ಇರುವುದು.

6ಆದರೂ ಎಣ್ಣೆಮರವನ್ನು ಅಲ್ಲಾಡಿಸಿದಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು.ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿನಾಲ್ಕೈದು ಕಾಯಿಗಳು ಉಳಿದಿರುವುವು.ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು,ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.

7ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರುಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.

8ಅವರು ತಮ್ಮ ಕೈಕೆಲಸವಾದಬಲಿಪೀಠಗಳನ್ನು ದೃಷ್ಟಿಸುವರು.ಬೆರಳುಗಳು ಮಾಡಿದ ಧೂಪಪೀಠಗಳನ್ನು,ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.

9ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.

10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು,ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ.ನೀನು ರಮ್ಯವಾದ ಗಿಡಗಳನ್ನುಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,

11ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ,ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿನಿನ್ನ ಸುಗ್ಗಿ ಏನೂ ಇರುವುದಿಲ್ಲ.

12ಆಹಾ, ಸಮುದ್ರವು ಭೋರ್ಗರೆಯುವಂತೆಭೋರ್ಗರೆಯುವ ಬಹು ಜನಾಂಗಗಳ ಗದ್ದಲ!ಮಹಾ ಜಲಪ್ರವಾಹಗಳು ಘೋಷಿಸುವಂತೆಘೋಷಿಸುವ ಜನಗಳ ಘೋಷ!

13ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ.ಆದರೆ ದೇವರು ಅವರನ್ನು ಗದರಿಸುತ್ತಲೇ,ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ,ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.

14ಸಾಯಂಕಾಲದಲ್ಲಿ ಭಯಭ್ರಾಂತಿ,ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು.ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ.ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]