Skip to content
The Believer's Library

Biblica® Open Kannada Contemporary Version 2022

Isaiah 18 OKCV

Side by side with the Father's Heart Bible™

ಕೂಷಿಗೆ ವಿರೋಧವಾದ ಪ್ರವಾದನೆಗಳು

1ಕೂಷ್ ನದಿಯ ಆಚೆಯಲ್ಲಿರುವ ಸೀಮೆ,ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!

2ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ.ಶೀಘ್ರವಾಗಿ ಬರುತ್ತಿರುವ ದೂತರೇ,ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ,ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ,ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.

3ಜಗದ ಸಕಲ ನಿವಾಸಿಗಳೇ!ಭೂಮಿಯಲ್ಲಿ ವಾಸಿಸುವವರೇ!ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗಅದನ್ನು ನೀವು ನೋಡುವಿರಿ,ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.

4ಯೆಹೋವ ದೇವರು ನನಗೆ ಹೀಗೆ ಹೇಳಿದರು,“ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು.ಬಿಸಿಹಗಲಿನ ಸೂರ್ಯನಂತೆಯೂಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”

5ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರುಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ,ಚಿಗುರುಗಳನ್ನು ಕಡಿದುಹಾಕುವರು.

6ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ,ಭೂಮಿಯ ಮೃಗಗಳಿಗೂ ಆಹಾರವಾಗುವುವು.ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ,ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.

7ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ,ಸರ್ವರಿಗೂ ಭಯಪ್ರಧರಾದ ಜನರಿಂದಲೂ,ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು.ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]