Skip to content
The Believer's Library

Biblica® Open Kannada Contemporary Version 2022

Isaiah 2 OKCV

Show OKCV only
Verse × ×
1 The word that Isaiah son of Amoz saw concerning Judah and Jerusalem. ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
2 In the last days the mountain of our Father's house will be firmly established as the highest of the mountains, raised above the hills, and all the nations will stream to it. ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.
3 Many peoples will come and say, "Come, let us go up to the mountain of God, to his house, so he can teach us his ways and we can walk in his paths." For instruction will go out from Zion, and the word of our Father from Jerusalem. ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.
4 He will judge between the nations and settle disputes for many peoples. They will beat their swords into plowshares and their spears into pruning hooks; nation will not lift up sword against nation, nor will they train for war anymore. ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.
5 House of Jacob, come, let us walk in the light of our Father. ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.
6 For you have abandoned your people, the house of Jacob, because they are filled with influences from the east and with fortune-tellers like the Philistines, and they have made alliances with foreigners. ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.
7 Their land is full of silver and gold, with no end to their treasures; their land is full of horses, with no end to their chariots. ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
8 Their land is full of idols; they bow down to the work of their hands, to what their own fingers have made. ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.
9 So mankind is brought low, and everyone is humbled—do not forgive them. ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.
10 Go into the rocks and hide in the dust from the dread of our Father and from the splendor of his majesty. ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.
11 The proud eyes of mankind will be brought low, and the arrogance of men will be humbled; our Father alone will be exalted in that day. ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.
12 For the Father of heaven's armies has a day in store against all that is proud and lofty, against all that is lifted up, so that it will be brought low, ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.
13 against all the cedars of Lebanon, lofty and lifted up, and against all the oaks of Bashan, ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ
14 against all the high mountains and against all the lofty hills, ಎಲ್ಲಾ ಉನ್ನತವಾಗಿರುವ ಪರ್ವತಗಳು, ಎತ್ತರವಾದ ಗುಡ್ಡಗಳು,
15 against every high tower and against every fortified wall, ಎಲ್ಲಾ ಎತ್ತರವಾದ ಗೋಪುರಗಳು, ಭದ್ರವಾದ ಎಲ್ಲಾ ಗೋಡೆಗಳ ಮೇಲೆಯೂ,
16 against all the ships of Tarshish and against every magnificent vessel. ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು.
17 The arrogance of mankind will be humbled, and the pride of men brought low; our Father alone will be exalted in that day, ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.
18 and the idols will completely vanish. ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.
19 People will flee into the caves of the rocks and into holes in the ground from the dread of our Father and from the splendor of his majesty, when he rises to shake the earth. ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.
20 In that day people will throw away their idols of silver and their idols of gold to the moles and bats, which they made for themselves to worship. ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.
21 They will go into the clefts of the rocks and into the crevices of the cliffs from the dread of our Father and from the splendor of his majesty, when he rises to shake the earth. ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.
22 Stop trusting in mere man, who has only breath in his nostrils. What good is he? ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]