Skip to content
The Believer's Library

Biblica® Open Kannada Contemporary Version 2022

Isaiah 23 OKCV

Side by side with the Father's Heart Bible™

ಟೈರಿನ ವಿಷಯವಾದ ಪ್ರವಾದನೆ

1ಟೈರಿನ ವಿಷಯವಾದ ಪ್ರವಾದನೆ:ತಾರ್ಷೀಷಿನ ಹಡಗುಗಳೇ, ಗೋಳಾಡಿರಿ,ಏಕೆಂದರೆ ಟೈರ್ ಹಾಳಾಗಿರುವುದರಿಂದನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ.ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

2ದ್ವೀಪಗಳ ನಿವಾಸಿಗಳೇ,ಸಮುದ್ರವನ್ನು ದಾಟುವ ಸೀದೋನಿನ ವರ್ತಕರಿಂದಸಮೃದ್ಧಿಯನ್ನು ಹೊಂದಿದವರೇ ಮೌನವಾಗಿರಿ.

3ಪ್ರವಾಹದಿಂದ ಶೀಹೋರಿನ ಧಾನ್ಯವೂ,ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು.ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.

4ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ.ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ:“ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ,ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”

5ಈಜಿಪ್ಟಿನಿಂದ ಸುದ್ದಿ ಆದ ಹಾಗೆಟೈರಿನ ಸುದ್ದಿಗೆ ಬಹಳ ವೇದನೆ ಪಡುವರು.

6ತಾರ್ಷೀಷಿಗೆ ದಾಟಿ ಹೋಗಿರಿ,ದ್ವೀಪ ನಿವಾಸಿಗಳೇ ಗೋಳಾಡಿರಿ.

7ನಿಮ್ಮ ಉಲ್ಲಾಸದ ಪಟ್ಟಣವೂ,ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ?ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿನಿವಾಸಿಸುವುದಕ್ಕೆ ತೆಗೆದುಕೊಂಡು ಹೋಗುವವು.

8ಅದು ಕಿರೀಟದಾಯಕವಾದ ಪಟ್ಟಣವು.ಅದರ ವರ್ತಕರಾದ ಪ್ರಭುಗಳು,ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ.ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?

9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.

10ತಾರ್ಷೀಷಿನ ಮಗಳೇ,ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು.ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.

11ಯೆಹೋವ ದೇವರು ಸಮುದ್ರದ ಮೇಲೆತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ.ಅವರು ವ್ಯಾಪಾರದ ಪಟ್ಟಣವನ್ನುಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.

12“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ,ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ.“ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು.ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”

13ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನುಕಾಡುಮೃಗಗಳಿಗೆ ಈಡುಮಾಡುವ ತನಕ ಈ ಜನರು ಇರಲಿಲ್ಲ.ಗೋಪುರಗಳನ್ನು ಕಟ್ಟಿಸಿಕೊಂಡುಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.

14ತಾರ್ಷೀಷಿನ ಹಡಗುಗಳೇ, ಗೋಳಾಡಿರಿ!ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ.

15ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:

16“ಮರೆತುಹೋದ ವೇಶ್ಯೆಯೇ,ಕಿನ್ನರಿಯನ್ನು ತೆಗೆದುಕೋ.ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ,ಬಹಳ ಗೀತೆಗಳನ್ನು ಹಾಡು.”

17ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು. 18ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]