Skip to content
The Believer's Library

Biblica® Open Kannada Contemporary Version 2022

Isaiah 3 OKCV

Show OKCV only
Verse × ×
1 For look—the Father of heaven's armies is about to strip from Jerusalem and from Judah every support and supply: the whole supply of bread and the whole supply of water, ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.
2 the warrior and the soldier, the judge and the prophet, the fortune-teller and the elder, ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,
3 the commander of fifty and the man of rank, the counselor, the skilled craftsman, and the clever enchanter. ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.
4 "I will make mere boys their officials, and childish whim will rule over them. “ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”
5 The people will oppress one another, each man against his neighbor; the young will rise up against the old, and the lowly against the honored." ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.
6 A man will seize his brother in his father's house and say, "You have a coat—you be our leader; take charge of this heap of ruins." ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”
7 But on that day he will cry out, "I am no healer! There is no bread and no coat in my house—you will not make me leader of the people." ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.
8 For Jerusalem has stumbled and Judah has fallen, because their words and their deeds are against our Father, defying his glorious presence. ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.
9 The look on their faces testifies against them; they flaunt their sin like Sodom—they do not hide it. How terrible for them, for they have brought disaster on themselves! ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
10 Tell the righteous it will go well with them, for they will eat the fruit of their deeds. ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
11 How terrible for the wicked! It will go badly for him, for what his hands have done will be repaid to him. ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.
12 My people—children are their oppressors, and women rule over them. My people, your guides lead you astray and have swallowed up the path you should walk. ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.
13 Our Father takes his stand to bring his case; he rises to judge the peoples. ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ; ಅವರು ಜನರನ್ನು ನಿರ್ಣಯಿಸಲು ಎದ್ದರು.
14 Our Father enters into judgment with the elders and officials of his people: "It is you who have devoured the vineyard; the plunder of the poor is in your houses. ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
15 What do you mean by crushing my people and grinding the faces of the poor?" declares the Father of heaven's armies. ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.
16 Our Father said: "Because the daughters of Zion are proud—walking with outstretched necks and flirting eyes, mincing along with quick little steps, jingling the anklets on their feet, ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;
17 therefore the Sovereign Father will strike the heads of the daughters of Zion with scabs, and our Father will lay bare their foreheads." ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”
18 On that day the Sovereign Father will strip away their finery: the anklets, the headbands, the crescent ornaments, ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,
19 the earrings, the bracelets, the veils, ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,
20 the headdresses, the ankle chains, the sashes, the perfume flasks, the charms, ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,
21 the signet rings, the nose rings, ಮುದ್ರೆ ಉಂಗುರ, ಮೂಗುತಿ,
22 the festival robes, the capes, the cloaks, the purses, ಹಬ್ಬದ ಉಡಿಗೆ ತೊಡಿಗೆ, ಮೇಲಂಗಿ, ಶಾಲು, ಕೈಚೀಲ,
23 the hand mirrors, the fine linen garments, the turbans, and the shawls. ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.
24 Then, instead of perfume there will be a stench; instead of a sash, a rope; instead of elegantly styled hair, baldness; instead of fine robes, a wrapping of coarse cloth; branding instead of beauty. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.
25 Your men will fall by the sword, your warriors in the battle. ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.
26 Her gates will mourn and lament; stripped bare, she will sit on the ground. ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]