Skip to content
The Believer's Library

Biblica® Open Kannada Contemporary Version 2022

Isaiah 4 OKCV

Show OKCV only
Verse × ×
1 On that day seven women will take hold of one man, saying, "We will eat our own bread and wear our own clothes; only let us be called by your name. Take away our disgrace." ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.
2 On that day the Branch of our Father will be beautiful and glorious, and the fruit of the land will be the pride and splendor of the survivors of Israel. ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.
3 And whoever is left in Zion and remains in Jerusalem will be called holy—everyone recorded for life in Jerusalem, ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.
4 when the Sovereign Father has washed away the filth of the daughters of Zion and rinsed the bloodstains of Jerusalem from within her by a spirit of judgment and a spirit of burning. ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.
5 Then our Father will create over the whole site of Mount Zion and over her assemblies a cloud by day and smoke, and a bright, flaming fire by night; for there will be a canopy over all the glory. ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.
6 It will be a shelter to give shade from the heat by day, and a refuge and hiding place from storm and rain. ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]