Skip to content
The Believer's Library

Biblica® Open Kannada Contemporary Version 2022

Isaiah 47 OKCV

Side by side with the Father's Heart Bible™

ಬಾಬಿಲೋನಿನ ಪತನ

1ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ,ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ!ಕಸ್ದೀಯರ ಪುತ್ರಿಯೇ,ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ.ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.

2ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು.ಮುಸುಕನ್ನು ತೆಗೆದುಹಾಕಿ,ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ,ನದಿಗಳನ್ನು ಹಾದುಹೋಗು.

3ನಿನ್ನ ಬೆತ್ತಲೆತನವು ಮರೆಮಾಡದೇ ಇದ್ದುದರಿಂದನೀನು ನಾಚಿಕೆಗೆ ಈಡಾಗುವೆ.ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.

4ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು.ಅವರೇ ಇಸ್ರಾಯೇಲಿನ ಪರಿಶುದ್ಧರು.

5ಕಸ್ದೀಯರ ಪುತ್ರಿಯೇ,“ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು.ಏಕೆಂದರೆ ಇನ್ನು ಮೇಲೆನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.

6ನಾನು ನಿನ್ನ ಜನರ ಮೇಲೆ ರೋಷಗೊಂಡು,ನನ್ನ ಸೊತ್ತನ್ನು ಅಪವಿತ್ರ ಮಾಡಿ,ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು.ನೀನು ಅವರಿಗೆ ಕರುಣೆಯನ್ನು ತೋರಿಸದೆ,ವೃದ್ಧರ ಮೇಲೆಯೂ,ಬಹು ಭಾರವಾದ ನೊಗವನ್ನು ಹೊರಿಸಿದೆ.

7‘ನಾನು ಶಾಶ್ವತವಾದ ರಾಣಿ’ಎಂದು ನೀನು ಅಂದುಕೊಂಡದ್ದರಿಂದಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ.ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.

8“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ.‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ.ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ,ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ,ಈಗ ಇದನ್ನು ಕೇಳು.

9ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ,ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯುಇವೆರಡೂ ನಿನಗೆ ಬರುವುದು.ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ,ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ,ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.

10ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು,‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ.ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ,ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ.ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.

11ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದಕೇಡು ನಿನ್ನ ಮೇಲೆ ಬರುವುದು.ನೀನು ಪರಿಹರಿಸಲಾಗದ ವಿಪತ್ತುನಿನ್ನ ಮೇಲೆ ಬೀಳುವುದು.ನಿನಗೆ ತಿಳಿಯದ ನಾಶನವುಫಕ್ಕನೆ ನಿನ್ನ ಮೇಲೆ ಬರುವುದು.”

12ನಿನ್ನ ಮಾಟಗಳ ಸಂಗಡ ನಿಂತುಕೋ.ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ,ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು.ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು.ಒಂದು ವೇಳೆ ಭಯ ಉಂಟಾದೀತು.

13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ.ಖಗೋಳಜ್ಞರು, ಜೋಯಿಸರು, ಪಂಚಾಂಗದವರು,ಇವರೆಲ್ಲರೂ ನಿಂತುಕೊಂಡು ನಿನಗೆ ಬರುವವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.

14ಇಗೋ, ಅವರೆಲ್ಲಾ ಕೂಳೆಯಂತಿರುವರು,ಬೆಂಕಿಯು ಅವರನ್ನು ಸುಟ್ಟುಬಿಡುವುದು.ಜ್ವಾಲೆಯ ರಭಸದಿಂದ ತಮ್ಮನ್ನುರಕ್ಷಿಸಿಕೊಳ್ಳಲಾರರು ಇಲ್ಲವೆಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ.ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.

15ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು.ನಿನ್ನ ಬಾಲ್ಯ ಪ್ರಾಯದಿಂದ ನಿನ್ನ ವರ್ತಕರು ಚದರಿ,ತಮ್ಮ ತಮ್ಮ ಪ್ರಾಂತಕ್ಕೆ ಹೋಗಿ ಬಿಡುವರು.ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]