Skip to content
The Believer's Library

Biblica® Open Kannada Contemporary Version 2022

Isaiah 48 OKCV

Side by side with the Father's Heart Bible™

ಹಟಮಾರಿ ಇಸ್ರಾಯೇಲರು

1“ಇಸ್ರಾಯೇಲ್ ಎಂಬ ಹೆಸರಿನವರೂ,ಯೆಹೂದವೆಂಬ ಒರತೆಯಿಂದ ಬಂದವರೂಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ:ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು,ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ.ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

2ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದುಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ.ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.

3ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ.ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ.ನಾನು ತಟ್ಟನೆ ನಡೆಸಲು, ಅವು ನೆರವೇರಿದವು.

4ಏಕೆಂದರೆ ನೀನು ಹಟಗಾರ.ನಿನ್ನ ಕತ್ತಿನ ನರಗಳು ಕಬ್ಬಿಣ,ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.

5‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ.ನನ್ನ ಕೆತ್ತಿದ ವಿಗ್ರಹ ಮತ್ತು ಎರಕದವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆನಾನು ಪುರಾತನ ಕಾಲದಲ್ಲಿಯೇಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.

6ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು.ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ?“ಇಂದಿನಿಂದ ಹೊಸ ಸಂಗತಿಗಳನ್ನೂ,ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.

7ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ;‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ಎಂದು ನೀನು ಕೊಚ್ಚಿಕೊಳ್ಳದಂತೆ,ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ.

8ನೀನು ಕೇಳಿಲ್ಲ, ತಿಳಿದೂ ಇಲ್ಲ.ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ.ಏಕೆಂದರೆ ನೀನು ದೊಡ್ಡ ವಂಚಕನೆಂದೂ,ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.

9ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು.ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ,ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.

10ನಾನು ನಿನ್ನನ್ನು ಪರಿಶೋಧಿಸಿದ್ದೇನೆ.ಆದರೆ ಬೆಳ್ಳಿಯಂತೆ ಅಲ್ಲ,ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.

11ನನಗಾಗಿಯೇ, ನನಗೋಸ್ಕರವೇ ಇದನ್ನು ಮಾಡುವೆನು.ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?ನನ್ನ ಮಹಿಮೆಯನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.

ಇಸ್ರಾಯೇಲಿನ ಬಿಡುಗಡೆ

12“ಯಾಕೋಬೇ, ನಾನು ಕರೆದ ಇಸ್ರಾಯೇಲೇ,ನನ್ನ ಕಡೆಗೆ ಕಿವಿಗೊಡು.ಆತನು ನಾನೇ,ನಾನೇ ಮೊದಲನೆಯವನು, ನಾನೇ ಕಡೆಯವನು.

13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು,ನನ್ನ ಬಲಗೈ ಆಕಾಶವನ್ನು ಹರಡಿತು,ನಾನು ಅವುಗಳನ್ನು ಕರೆಯಲು,ಅವು ಒಟ್ಟಾಗಿ ನಿಂತುಕೊಂಡವು.

14“ನೀವೆಲ್ಲರೂ ಕೂಡಿಕೊಂಡು ಕೇಳಿರಿ.ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು?ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನುಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ.ತನ್ನ ತೋಳು ಕಸ್ದೀಯರ ಮೇಲೆ ಇರುವುದು.

15ನಾನೇ, ನಾನಾಗಿಯೇ ಮಾತನಾಡಿದ್ದೇನೆ.ನಾನೇ ಅವನನ್ನು ಕರೆದದ್ದು;ಅವನನ್ನು ನಾನೇ ಬರಮಾಡಿದ್ದೇನೆ.ಅವನ ಮಾರ್ಗವು ಯಶಸ್ವಿಯಾಗುವುದು.

16“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ.“ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ,ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.”ಈಗ ಸಾರ್ವಭೌಮ ಯೆಹೋವ ದೇವರುತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.

17ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂಆಗಿರುವ ಯೆಹೋವ ದೇವರ ಮಾತಿದು,“ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ,ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.

18ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು!ಆಗ ನಿನ್ನ ಸಮಾಧಾನವು ನದಿಯಂತೆಯೂ,ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,

19ನಿನ್ನ ಸಂತಾನವು ಸಹ ಮರಳಿನಂತೆಯೂ,ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು.ಅವರ ಹೆಸರುಗಳು ನನ್ನ ಸಮ್ಮುಖದಿಂದ,ಅಳಿದುಹೋಗದೆ ಇರುವುದು.”

20ಬಾಬಿಲೋನಿನಿಂದ ಹೊರಡಿರಿ.ಕಸ್ದೀಯರ ಕಡೆಯಿಂದ ಓಡಿಹೋಗಿರಿ.ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ.ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ.“ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನುವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.

21ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ.ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು.ದೇವರು ಬಂಡೆಯನ್ನು ಸೀಳಲು,ನೀರು ರಭಸದಿಂದ ಹೊರಗೆ ಬಂತು.

22“ದುಷ್ಟರಿಗೆ ಸಮಾಧಾನವೇ ಇಲ್ಲ,”ಎಂದು ಯೆಹೋವ ದೇವರು ನುಡಿಯುತ್ತಾರೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]