Skip to content
The Believer's Library

Biblica® Open Kannada Contemporary Version 2022

Isaiah 7 OKCV

Show OKCV only
Verse × ×
1 In the days of Ahaz son of Jotham, son of Uzziah, king of Judah, Rezin king of Aram and Pekah son of Remaliah king of Israel marched on Jerusalem to fight it, but could not overpower it. ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
2 When the house of David heard, "Aram has joined forces with Ephraim," the hearts of Ahaz and his people shook like forest trees before the wind. ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
3 Then our Father told Isaiah, "Go meet Ahaz, you and your son Shear-jashub, at the end of the upper pool's channel, on the road to the Launderer's Field, ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.
4 and tell him: Take care, stay calm, don't be afraid or lose heart over these two smoking stubs of firewood—over the fierce anger of Rezin, Aram, and Remaliah's son. ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
5 Because Aram, along with Ephraim and the son of Remaliah, has plotted evil against you, saying, ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,
6 'Let us march up against Judah, terrify it, split it open for ourselves, and set the son of Tabeel as king over it,' “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.
7 this is what the Sovereign Father says: It will not stand, and it will not happen. ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.
8 For the head of Aram is Damascus, and the head of Damascus is Rezin. Within sixty-five years Ephraim will be shattered—no longer a people. ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.
9 The head of Ephraim is Samaria, and the head of Samaria is the son of Remaliah. If you do not stand firm in faith, you will not stand at all." ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”
10 Our Father spoke to Ahaz again, saying, ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:
11 "Ask your Father for a sign; make it deep as the grave or high as the heavens." “ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.
12 But Ahaz said, "I will not ask, and I will not put our Father to the test." ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.
13 Isaiah said, "Listen, house of David! Isn't it enough that you weary people? Must you weary my Father too? ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?
14 So the Sovereign Father himself will give you a sign: Look, the virgin will conceive, bear a son, and name him Immanuel. ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
15 He will eat curds and honey by the time he knows to reject evil and choose good. ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.
16 Before the boy knows to reject evil and choose good, the land whose two kings you dread will be abandoned. ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.
17 Our Father will bring on you, your people, and your father's house days unlike any since Ephraim broke from Judah—the king of Assyria. ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”
18 In that day our Father will whistle for the fly from Egypt's distant streams and for the bee in the land of Assyria, ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.
19 and they will all come and settle in the steep ravines and in the clefts of the rocks, on all the thornbushes and at all the watering holes. ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.
20 In that day the Sovereign Father will shave—with a razor hired from beyond the Euphrates, the king of Assyria—the head and leg hair, and sweep the beard away too. ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.
21 In that day a man will keep alive a young cow and two sheep, ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
22 and because of the abundance of milk, he will eat curds; all left in the land will eat curds and honey. ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.
23 That day, every place with 1,000 vines worth 1,000 silver pieces will become thorns and thornbushes. ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.
24 People come there with arrows and bow, for all the land will be thornbushes and thorns. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.
25 You will not go to the hills once worked with the hoe, for fear of the thornbushes and thorns; they become pasture for cattle and trampling ground for sheep." ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]