Skip to content
The Believer's Library

Biblica® Open Kannada Contemporary Version 2022

James 1 OKCV

Show OKCV only
Verse × ×
1 James, a servant of our Father and the Lord Jesus Christ, to the twelve tribes scattered among the nations: greetings. ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.
2 Consider it pure joy, my brothers and sisters, whenever you face trials of many kinds, ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.
3 because you know that the testing of your faith produces perseverance. ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.
4 Let perseverance finish its work so that you may be mature and complete, lacking nothing. ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.
5 If any of you lacks wisdom, ask our Father, who gives freely to all without criticizing, and it will be given you. ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.
6 Ask in faith, without doubting, for the doubter is like a sea wave, driven and tossed by the wind. ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.
7 That person should not expect to receive anything from our Father. ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.
8 Such a person is double-minded and unstable in all their ways. ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.
9 Let the believer in humble circumstances take pride in their high position, ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.
10 but let the rich boast in their low state, since they'll pass like a wildflower. ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.
11 The sun rises with scorching heat and withers the grass. Its flower falls; its beauty vanishes. So the rich fade away amid their pursuits. ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.
12 Blessed is the one who endures trial, because once tested they'll receive the crown of life our Father promised to those who love him. ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
13 When tempted, no one should say, "Our Father is tempting me." Evil can't tempt our Father, and he tempts no one. ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.
14 But each person is tempted, dragged away and lured by their own evil desire. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.
15 Then desire conceives and gives birth to sin; sin, full-grown, gives birth to death. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.
16 Don't be deceived, my dear brothers and sisters. ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
17 Every good and perfect gift is from above, coming down from the Father of lights, who never changes or casts a shifting shadow. ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
18 By his choice, he gave us birth through the word of truth, so we'd be a kind of firstfruits of his creation. ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.
19 Know this, my dear brothers and sisters: everyone should be quick to listen, slow to speak, slow to anger, ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
20 because human anger does not produce the righteousness of our Father. ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.
21 So strip off all moral filth and excess evil; humbly receive the word planted in you, able to save your souls. ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
22 Do not merely listen to the word, and so deceive yourselves. Do what it says. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
23 Anyone who hears the word but doesn't act on it is like one who looks at his natural face in a mirror, ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು.
24 and, after looking at himself, goes away and immediately forgets what he looks like. ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
25 But whoever peers into the perfect law of freedom, continuing in it—not a forgetful hearer but a doer who acts—will be blessed in his doing. ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.
26 If anyone thinks himself religious but doesn't control his tongue, he deceives his own heart—his religion is worthless. ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.
27 Pure and spotless religion before our Father is this: caring for orphans and widows in their distress, and keeping oneself unstained from the world. ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]