Skip to content
The Believer's Library

Biblica® Open Kannada Contemporary Version 2022

James 3 OKCV

Show OKCV only
Verse × ×
1 My brothers and sisters, not many of you should become teachers, since we teachers face stricter judgment. ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
2 For we all stumble in many ways. Anyone who never stumbles in speech is a mature man, able to control his whole body too. ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3 If we put bits in horses' mouths to make them obey us, we guide their whole bodies too. ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ.
4 Consider ships too: though large and driven by strong winds, a tiny rudder steers them wherever the pilot wants. ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ.
5 So too the tongue is a small body part, yet boasts great things. See how small a fire sets ablaze a great forest! ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.
6 The tongue is a fire, a world of wickedness placed among our body's parts. It stains the whole body, sets the whole course of life ablaze, and is itself set ablaze by hell. ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.
7 Every kind of beast, bird, reptile, and sea creature is tamed, and has been tamed, by humankind, ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.
8 but no human being can tame the tongue. It is a restless evil, full of deadly poison. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.
9 With it we bless our Father; with it we curse people made in the likeness of our Father. ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ.
10 From the same mouth come blessing and cursing. My brothers and sisters, this should not be. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.
11 Does a spring pour out both fresh and bitter water from the same opening? ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ?
12 Brothers and sisters, can a fig tree bear olives, or a vine figs? Neither can a salt spring yield fresh water. ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.
13 Who is wise and understanding among you? Let him show his deeds through good conduct, in wisdom's humility. ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.
14 But if bitter envy and selfish ambition fill your heart, don't boast or lie against the truth. ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.
15 This is not the wisdom that comes down from above, but is earthly, unspiritual, demonic. ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.
16 For where there is jealousy and selfish ambition, there will be disorder and every vile practice. ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.
17 Wisdom from above: pure first, then peace-loving, gentle, reasonable, full of mercy and good fruit, unbiased, sincere. ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
18 And the harvest of righteousness is sown in peace by those who make peace. ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]