Skip to content
The Believer's Library

Biblica® Open Kannada Contemporary Version 2022

James 4 OKCV

Show OKCV only
Verse × ×
1 Where do wars and fights among you come from? Isn't it your cravings warring inside you? ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?
2 You want and don't have—you kill. You crave and can't get it—you quarrel and fight. You don't have because you don't ask. ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
3 You ask and do not receive, because you ask wrongly, to spend it on your own pleasures. ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.
4 You adulterous people! Don't you know friendship with the world is hostility toward our Father? Whoever chooses to be its friend becomes an enemy of our Father. ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
5 Or does Scripture speak for nothing, saying the spirit he placed in us longs jealously? ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?
6 But he gives more grace. That is why Scripture says, "Our Father opposes the proud but gives grace to the humble." ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.
7 Submit yourselves, then, to our Father. Resist the devil, and he will flee from you. ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
8 Come close to our Father, and he will come close to you. Cleanse your hands, sinners; purify your hearts, double-minded. ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
9 Grieve, mourn, and weep. Turn your laughter to mourning and your joy to gloom. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
10 Humble yourselves before our Father, and he will lift you up. ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.
11 Don't speak against each other, brothers and sisters. Whoever speaks against a brother, or judges him, speaks against the law and judges it. But if you judge the law, you're not keeping it—you're judging it. ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.
12 Only one gives the law and judges—able to save or destroy. Who are you to judge your neighbor? ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
13 Come now, you who say, "Today or tomorrow we will go to this or that city, spend a year, trade, and profit." “ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ.
14 You don't know what tomorrow brings. What is your life? For you're a mist, visible briefly, then gone. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
15 Instead you ought to say, "If our Father wills, we will live and do this or that." ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.
16 As it is, you boast in your arrogance. All such boasting is evil. ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.
17 So whoever knows the good to do and fails to do it, sin is theirs. ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]