Skip to content
The Believer's Library

Biblica® Open Kannada Contemporary Version 2022

James 5 OKCV

Show OKCV only
Verse × ×
1 Come now, you who are rich, weep and wail over the miseries that are coming upon you. ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2 Your riches have rotted, and your clothes have become moth-eaten. ನಿಮ್ಮ ಐಶ್ವರ್ಯವು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ.
3 Your gold and silver have rusted; their rust will witness against you and burn your flesh like fire. You piled up riches in the last days. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
4 Look: the wages you held back from the workers who mowed your fields cry out, and the harvesters' cries have reached the ears of the Father of heaven's armies. ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.
5 You lived on earth in luxury and indulgence. You fattened your hearts in a day of slaughter. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
6 You have condemned and murdered the righteous one, who does not resist you. ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.
7 So be patient, brothers and sisters, until the Lord's coming. Think of the farmer: he waits patiently for the land's precious fruit, until it gets the early and late rains. ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
8 You too must be patient. Strengthen your hearts, because the coming of the Lord is near. ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.
9 Don't grumble against each other, brothers and sisters, or you'll be judged. Look—the Judge stands at the doors. ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.
10 Brothers and sisters, take the prophets who spoke in the name of our Father as examples of suffering and patience. ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.
11 See, we call those who endured blessed. You've heard of Job's endurance and seen what our Father brought about—our Father is rich in compassion and mercy. ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.
12 Above all, my brothers and sisters, do not swear—neither by heaven, nor earth, nor any other oath. Let your yes be yes and your no, no, so you won't fall under judgment. ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13 Is anyone among you suffering? Let them pray. Is anyone cheerful? Let them sing praises. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
14 Anyone sick among you? Have them call for the church elders, and have the elders pray over them, anointing them with oil in the name of the Lord. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
15 The prayer of faith will save the sick person, and the Lord will raise him up. And if he has sinned, he will be forgiven. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
16 So confess your sins to each other and pray for each other, that you may be healed. A righteous person's prayer is powerful and effective. ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
17 Elijah was a man like us, and he prayed hard that it not rain; it did not rain on the land for three years and six months. ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18 Then he prayed again, and the heavens gave rain, and the earth produced its fruit. ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು.
19 My brothers and sisters, if anyone among you wanders from the truth and someone turns them back, ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,
20 know this: whoever turns a sinner from their wrong way saves that person's soul from death and covers a multitude of sins. ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]