Skip to content
The Believer's Library

Biblica® Open Kannada Contemporary Version 2022

Jeremiah 47 OKCV

Side by side with the Father's Heart Bible™

ಫಿಲಿಷ್ಟಿಯರನ್ನು ಕುರಿತು ಸಂದೇಶ

1ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:

2ಯೆಹೋವ ದೇವರು ಹೀಗೆ ಹೇಳುತ್ತಾರೆ:“ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ,ಅದು ತುಂಬಿ ತುಳುಕುವ ಪ್ರಳಯವಾಗುವುದು;ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ,ಅದರ ನಿವಾಸಿಗಳನ್ನೂ ಆಕ್ರಮಿಸುವುವು;ಆಗ ಮನುಷ್ಯರು ಕೂಗುವರು;ದೇಶದ ನಿವಾಸಿಗಳೆಲ್ಲರು ಗೋಳಾಡುವರು.

3ಅವನ ಬಲವಾದ ಕುದುರೆಗಳ ಗೊರಸುಗಳತುಳಿಯುವಿಕೆಯ ಶಬ್ದದಿಂದಲೂಅವನ ರಥಗಳ ಘೋಷದಿಂದಲೂಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.

4ಏಕೆಂದರೆ ಫಿಲಿಷ್ಟಿಯರೆಲ್ಲರನ್ನುಸೂರೆ ಮಾಡುವುದಕ್ಕೂ ಟೈರಿನಿಂದಲೂಸೀದೋನಿನಿಂದಲೂ ಉಳಿದವರನ್ನುಕಡಿದುಬಿಡುವುದಕ್ಕೂ ಆ ದಿವಸ ಬಂತು.ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನುಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.

5ಗಾಜಾ ಊರು ಬೋಳಿಸಿಕೊಂಡಿದೆ.ಅಷ್ಕೆಲೋನ್ ನಾಶನ ಹೊಂದಿದೆ.ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?

6“ಅಯ್ಯೋ, ಯೆಹೋವ ದೇವರ ಖಡ್ಗವೇ,ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ?ನಿನ್ನ ಒರೆಯಲ್ಲಿ ಅಡಗಿಕೋ;ವಿಶ್ರಮಿಸಿಕೋ, ಸುಮ್ಮನಿರು.

7ಅದು ಹೇಗೆ ಸುಮ್ಮನಿರುವುದು?ಅಷ್ಕೆಲೋನಿಗೆ ವಿರೋಧವಾಗಿ ಮತ್ತುಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ?ಅಲ್ಲಿ ಅದನ್ನು ನೇಮಿಸಿದ್ದಾನೆ.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]