ಬಿಲ್ದದನ ಉತ್ತರ 1ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: 2“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ;ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. 3ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ?ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? 4ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ?ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? 5ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ;ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. 6ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ!ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”