Skip to content
The Believer's Library

Biblica® Open Kannada Contemporary Version 2022

Job 35 OKCV

Side by side with the Father's Heart Bible™

1ಎಲೀಹು ಮತ್ತೆ ಹೇಳಿದ್ದೇನೆಂದರೆ:

2“ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದುನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ?

3ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು?ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’

4“ನಾನು ನಿನಗೂ, ನಿನ್ನ ಸಂಗಡಇರುವ ಸ್ನೇಹಿತರಿಗೂ ಈಗ ಉತ್ತರ ಕೊಡುತ್ತೇನೆ.

5ಆಕಾಶಗಳನ್ನು ದೃಷ್ಟಿಸಿ ನೋಡು;ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು.

6ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ?ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು?

7ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು?ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು?

8ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು;ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.

9“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ;ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.

10ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?

11ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ?ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ಎಂದು ಯಾರೂ ಹೇಳುವುದಿಲ್ಲ.

12ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ;ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ.

13ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ;ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ.

14ಹೀಗಿರಲು, ‘ದೇವರು ಕಾಣುವುದಿಲ್ಲ,ನನ್ನ ವ್ಯಾಜ್ಯವು ದೇವರ ಮುಂದೆ ಇದೆ;ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ,ದೇವರು ನಿನಗೆ ಕಿವಿಗೊಡುವರೋ?

15ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ,‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ?

16ಆದ್ದರಿಂದ ಯೋಬನಾದ ನೀನು ವ್ಯರ್ಥವಾಗಿ ಬಾಯಿತೆರೆದು,ತಿಳುವಳಿಕೆಯಿಲ್ಲದೆ ಬಹಳ ಮಾತಾಡಿರುವಿ.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]