Skip to content
The Believer's Library

Biblica® Open Kannada Contemporary Version 2022

Joel 1 OKCV

Show OKCV only
Verse × ×
1 The word of our Father that came to Joel son of Pethuel. ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:
2 Hear this, you elders; listen, all who live in this land. Has anything like this happened in your days, or in the days of your ancestors? ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?
3 Tell your children about it, and let your children tell their children, and their children the next generation. ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.
4 What the cutting locust spared, the swarming locust ate; what the swarming locust spared, the hopping locust ate; and what the hopping locust spared, the destroying locust ate. ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.
5 Wake up, you drunkards, and weep; wail, all you wine drinkers, over the sweet wine, for it has been cut off from your lips. ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.
6 "For a nation has invaded my land, mighty and beyond number; its teeth are the teeth of a lion, and it has the fangs of a lioness. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.
7 It has devastated my vines and splintered my fig tree; it has stripped off their bark and cast it aside, leaving their branches bare and white." ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.
8 Wail like a virgin dressed in mourning clothes for the husband of her youth. ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.
9 The grain offering and the drink offering are cut off from the house of our Father; the priests, the ministers of our Father, mourn. ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.
10 The field is devastated, the ground mourns; for the grain is destroyed, the new wine dries up, the oil fails. ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.
11 Be ashamed, you farmers; wail, you grape growers, over the wheat and the barley, for the harvest of the field has perished. ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.
12 The vine is dried up, and the fig tree withers; the pomegranate, the palm, and the apple—all the trees of the field are dried up. Surely joy has withered away from all people. ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.
13 Put on mourning clothes and lament, you priests; wail, you ministers of the altar. Come, spend the night in mourning clothes, you ministers of my Father; for the grain offering and the drink offering are withheld from the house of your Father. ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.
14 Declare a fast; call a sacred assembly. Gather the elders and all who live in the land to the house of our Father, and cry out to our Father. ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.
15 Alas for the day! For the day of our Father is near, and it will come like destruction from the Almighty. ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.
16 Is not the food cut off right before our eyes—joy and gladness gone from the house of our Father? ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?
17 The seeds shrivel in the parched ground; the storehouses are desolate, the granaries are torn down, for the grain has dried up. ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.
18 How the animals groan! The herds of cattle wander in confusion because they have no pasture; even the flocks of sheep suffer. ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.
19 To you, our Father, I call, for fire has devoured the pastures of the wilderness, and flame has burned all the trees of the field. ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.
20 Even the wild animals cry out to you, for the streams have dried up, and fire has devoured the pastures of the wilderness. ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]