Skip to content
The Believer's Library

Biblica® Open Kannada Contemporary Version 2022

Joel 2 OKCV

Side by side with the Father's Heart Bible™

ಮಿಡತೆಗಳ ಒಂದು ಸೈನ್ಯ

1ನೀವು ಚೀಯೋನಿನಲ್ಲಿ ಕೊಂಬು ಊದಿರಿ.ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ.ದೇಶದ ನಿವಾಸಿಗಳೆಲ್ಲರು ನಡುಗಲಿ.ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ.ಅದು ಸಮೀಪವಾಗಿದೆ.

2ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ,ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ.ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ.ಅದು ಪ್ರಾಚೀನ ಕಾಲದಲ್ಲಿ ಮತ್ತುಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.

3ಅವುಗಳ ಮುಂದೆ ಬೆಂಕಿ ದಹಿಸುತ್ತದೆ.ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ.ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ.ಅವುಗಳ ಹಿಂದೆ ಕಾಡು ಹಾಳಾಗಿದೆ.ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.

4ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ.ಸವಾರರ ಹಾಗೆಯೇ ಓಡುತ್ತವೆ.

5ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ.ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ,ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.

6ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ.ಎಲ್ಲಾ ಮುಖಗಳು ಕಳೆಗುಂದುತ್ತವೆ.

7ಶೂರರ ಹಾಗೆ ಓಡುತ್ತವೆ.ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ.ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ.ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.

8ಒಂದು ಇನ್ನೊಂದನ್ನು ನೂಕುವುದಿಲ್ಲ.ಅವುಗಳಲ್ಲಿ ಪ್ರತಿಯೊಂದುತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ.ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.

9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ.ಗೋಡೆಯ ಮೇಲೆ ಓಡುತ್ತವೆ.ಅವು ಮನೆಗಳನ್ನು ಹತ್ತಿ,ಕಳ್ಳನ ಹಾಗೆ ಕಿಟಿಕಿಗಳಿಂದ ಪ್ರವೇಶಿಸುತ್ತವೆ.

10ಅವುಗಳ ಮುಂದೆ ಭೂಮಿಯು ನಡುಗುತ್ತದೆ.ಆಕಾಶಗಳು ಅದರುತ್ತವೆ.ಸೂರ್ಯ ಚಂದ್ರರು ಕಪ್ಪಾಗುತ್ತವೆ.ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.

11ಯೆಹೋವ ದೇವರು ತಮ್ಮ ಸೈನ್ಯಕ್ಕೆಗುಡುಗಿನಂತೆ ಆಜ್ಞಾಪಿಸುತ್ತಾರೆ.ಅವರ ಸೈನ್ಯ ಬಹು ದೊಡ್ಡದಾಗಿದೆ.ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು.ಯೆಹೋವ ದೇವರ ದಿವಸವು ದೊಡ್ಡದು,ಮಹಾ ಭಯಂಕರವಾದದ್ದು.ಅದನ್ನು ಸಹಿಸಿಕೊಳ್ಳುವವರು ಯಾರು?

ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ

12ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”

13ನಿಮ್ಮ ಬಟ್ಟೆಗಳನ್ನಲ್ಲ,ನಿಮ್ಮ ಹೃದಯಗಳನ್ನು ಹರಿದುಕೊಂಡು,ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ.ಅವರು ದಯೆಯೂ ಕರುಣೆಯೂ,ದೀರ್ಘಶಾಂತಿಯೂ ಮಹಾ ಪ್ರೀತಿಯೂಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.

14ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು.ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು.ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನುನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?

15ಚೀಯೋನಿನಲ್ಲಿ ಕೊಂಬು ಊದಿರಿ;ಪವಿತ್ರ ಉಪವಾಸವನ್ನು ಸಾರಿರಿ;ಪವಿತ್ರ ಸಭೆಯನ್ನು ಕರೆಯಿರಿ.

16ಜನರನ್ನು ಕೂಡಿಸಿರಿ;ಸಭೆಯನ್ನು ಪವಿತ್ರಗೊಳಿಸಿರಿ;ಹಿರಿಯರನ್ನು ಒಟ್ಟುಗೂಡಿಸಿರಿ,ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ;ಮದುಮಗನು ತನ್ನ ಕೊಠಡಿಯೊಳಗಿಂದಲೂಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.

17ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು,ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ,“ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು,ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನುದೂಷಣೆಗೆ ಗುರಿಮಾಡಬೇಡಿರಿ.‘ಅವರ ದೇವರು ಎಲ್ಲಿ?’ಎಂದು ಅವರು ಏಕೆ ನಿಂದಿಸಬೇಕು?”

ಯೆಹೋವ ದೇವರ ಉತ್ತರ

18ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು,ತಮ್ಮ ಜನರನ್ನು ಕನಿಕರಿಸುವರು.

19ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು,ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂನಿಮಗೆ ಸಾಕಾಗುವಷ್ಟು ಕಳುಹಿಸಿ,ನಿಮ್ಮನ್ನು ಇನ್ನು ಮೇಲೆಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.

20“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ,ಅದನ್ನು ಹಾಳುಬಿದ್ದ ಬಂಜರು ಭೂಮಿಗೂ,ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು.ಅದರ ದುರ್ವಾಸನೆಯು ಏರುವುದು.ಅದು ಗಬ್ಬು ನಾರುವುದು.”ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.

21ಯಹೂದ ದೇಶವೇ, ಭಯಪಡಬೇಡ;ಉಲ್ಲಾಸಿಸಿ, ಸಂತೋಷವಾಗಿರು.ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.

22ಕಾಡುಮೃಗಗಳೇ, ಭಯಪಡಬೇಡಿರಿ.ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ.ಮರಗಳು ತಮ್ಮ ಫಲವನ್ನು ಫಲಿಸುತ್ತವೆ.ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.

23ಚೀಯೋನಿನ ಜನರೇ,ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ.ಏಕೆಂದರೆ ನಿಮಗೆ ಮುಂಗಾರು ಮಳೆಯನ್ನುಸಾಕಷ್ಟು ಕೊಡುವರು.ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆನಿಮಗೆ ಸುರಿಸುವರು.

24ಕಣಗಳು ಧಾನ್ಯದಿಂದ ತುಂಬುವುವು.ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.

25“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು,ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು,ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನುನಿಮಗೆ ಪುನಃಸ್ಥಾಪಿಸಿ ಕೊಡುವೆನು.

26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು,ನಿಮ್ಮನ್ನು ಅದ್ಭುತವಾಗಿ ನಡೆಸಿದನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ.ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

27ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು.ನಾನೇ ನಿಮ್ಮ ಯೆಹೋವ ದೇವರು,ನಾನಲ್ಲದೆ ಬೇರೆ ದೇವರು ನಿಮಗಿಲ್ಲ.ನನ್ನ ಜನರು ಎಂದಿಗೂ ನಾಚಿಕೆಪಡರು.

ಯೆಹೋವ ದೇವರ ದಿನ

28“ಆಮೇಲೆ ನಾನು,ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.ನಿಮ್ಮ ಯುವಜನರಿಗೆ ದರ್ಶನಗಳಾಗುವವು.

29ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,ನನ್ನ ಆತ್ಮವನ್ನು ಸುರಿಸುವೆನು.

30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು,ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.

31ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು,ಸೂರ್ಯನು ಕತ್ತಲಾಗುವನು,ಚಂದ್ರನು ರಕ್ತವಾಗುವನು.

32ಯೆಹೋವ ದೇವರ ಹೆಸರನ್ನುಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂಅನೇಕರಿಗೆ ಮುಕ್ತಿ ದೊರಕುವುದು.ಯೆಹೋವ ದೇವರು ಹೇಳಿದ ಪ್ರಕಾರಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]