Skip to content
The Believer's Library

Biblica® Open Kannada Contemporary Version 2022

Joel 2 OKCV

Show OKCV only
Verse × ×
1 Blow the ram's horn in Zion; sound the alarm on my holy mountain! Let all who live in the land tremble, for the day of our Father is coming—it is near: ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.
2 A day of darkness and gloom, a day of clouds and thick darkness. Like dawn spreading across the mountains, a great and mighty army comes—nothing like it has ever been before, and nothing like it will ever come again. ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.
3 Before them fire devours, and behind them a flame blazes. The land before them is like the garden of Eden, but behind them a desolate wilderness—and nothing escapes them. ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.
4 They look like horses; like war horses they charge. ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.
5 Like the rumbling of chariots they leap over the mountaintops, like the crackling of flame consuming stubble, like a mighty army drawn up for battle. ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
6 Before them peoples writhe in anguish; every face grows pale. ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
7 Like warriors they charge; like soldiers they scale the wall. Each marches in line, never swerving from its course. ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.
8 They do not jostle one another; each keeps to its own path. They burst through the weapons and are not halted. ಒಂದು ಇನ್ನೊಂದನ್ನು ನೂಕುವುದಿಲ್ಲ. ಅವುಗಳಲ್ಲಿ ಪ್ರತಿಯೊಂದು ತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ. ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.
9 They rush upon the city; they run along the wall. They climb into the houses; through the windows they enter like a thief. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ. ಗೋಡೆಯ ಮೇಲೆ ಓಡುತ್ತವೆ. ಅವು ಮನೆಗಳನ್ನು ಹತ್ತಿ, ಕಳ್ಳನ ಹಾಗೆ ಕಿಟಿಕಿಗಳಿಂದ ಪ್ರವೇಶಿಸುತ್ತವೆ.
10 Before them the earth quakes, the heavens tremble. The sun and moon grow dark, and the stars no longer shine. ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.
11 Our Father raises his voice at the head of his army; his camp is very great, and mighty are those who carry out his word. The day of our Father is great and utterly terrifying—who can endure it? ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?
12 "Yet even now," declares our Father, "return to me with all your heart, with fasting, with weeping, and with mourning. ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”
13 "Tear your hearts, not your garments. Return to your Father, for he is gracious and compassionate, slow to anger and abounding in covenant love, and he relents from sending disaster. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
14 Who knows? He may turn and relent and leave behind a blessing—a grain offering and a drink offering for your Father." ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?
15 Blow a shofar in Zion; consecrate a fast; call a sacred assembly. ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.
16 Gather the people; consecrate the assembly; bring together the elders; gather the children, even the infants nursing at the breast. Let the bridegroom come out of his room, and the bride from her chamber. ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.
17 Let the priests who minister before our Father weep between the portico and the altar. Let them say, "Spare your people, our Father, and do not make your inheritance an object of scorn, a byword among the nations. Why should they say among the peoples, 'Where is their God?'" ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”
18 Then our Father became jealous for his land and took pity on his people. ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು.
19 Our Father answered his people: "Look, I am sending you grain, new wine, and oil, and you will be satisfied with them. Never again will I make you an object of scorn among the nations." ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.
20 "I will drive the northern army far from you, pushing it into a parched and desolate land—its front ranks into the Dead Sea and its rear into the Mediterranean Sea. Its stench will rise; its foul smell will go up, for it has done monstrous things. “ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.
21 Don't be afraid, land; rejoice and be glad, for our Father has done great things! ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.
22 Do not be afraid, you animals of the field, for the pastures of the wilderness are turning green; the tree bears its fruit; the fig tree and the vine yield their riches. ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
23 Be glad, children of Zion, and rejoice in your Father, for he has given you the autumn rain to show his faithfulness; he sends down for you abundant showers, the autumn and the spring rains, as before. ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.
24 The threshing floors will be full of grain; the vats will overflow with new wine and oil. ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.
25 I will repay you for the years the locusts have eaten—the swarming locust, the young locust, the destroying locust, and the cutting locust—my great army that I sent among you. “ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.
26 You will eat your fill and be satisfied, and you will praise the name of your Father, who has dealt wondrously with you; and never again will my people be put to shame. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
27 Then you will know that I am in the midst of Israel, and that I am your Father, and there is no other; and never again will my people be put to shame. ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.
28 "And afterward, I will pour out my Spirit on all flesh. Your sons and your daughters will prophesy, your old men will dream dreams, your young men will see visions. “ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.
29 Even on the male servants and the female servants in those days I will pour out my Spirit. ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು.
30 I will show wonders in the heavens and on the earth—blood and fire and columns of smoke. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
31 The sun will be turned to darkness and the moon to blood before the great and awesome day of our Father comes." ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
32 And this will happen: everyone who calls on the name of the Lord will be saved; for on Mount Zion and in Jerusalem there will be deliverance, as our Father has said, among the survivors whom our Father calls. ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]