Skip to content
The Believer's Library

Biblica® Open Kannada Contemporary Version 2022

John 1 OKCV

Show OKCV only
Verse × ×
1 In the beginning was the Word, and the Word was with our Father, and the Word was God. ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
2 He was in the beginning with our Father. ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು.
3 All things were made through him, and without him not one thing was made that was made. ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.
4 In him was life, and the life was the light of all people. ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.
5 The light shines in the darkness, and the darkness has not overcome it. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
6 There came a man sent from our Father, whose name was John. ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.
7 He came as a witness, to bear witness about the light, so that all might believe through John's witness. ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.
8 He was not the light, but came to bear witness about the light. ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.
9 The true light, which gives light to everyone, was coming into the world. ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.
10 He was in the world. The world came into being through him, yet did not know him. ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.
11 He came to his own, and his own people did not receive him. ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.
12 But to all who received him, believing in his name, he gave the right to become children of our Father, ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
13 children born not of blood nor of the will of flesh nor of the will of man, but of our Father. ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
14 The Word became flesh and lived among us. We saw his glory, the glory of the one and only Son from the Father, full of grace and truth. ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
15 John testified about him, crying out, "This is the one I meant: he who comes after me outranks me, since he existed before me." “ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.
16 For from his fullness we have all received, grace upon grace. ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.
17 For the law was given through Moses; grace and truth came through Jesus Christ. ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.
18 No one has ever seen our Father; the one and only God, close beside the Father, has made him known. ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.
19 This is John's testimony, when the Jews sent priests and Levites from Jerusalem to ask him, "Who are you?" ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.
20 He confessed, and did not deny, but confessed, "I am not the Christ." ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.
21 So they asked him, "What then? Are you Elijah?" "I am not," he said. "Are you the Prophet?" "No," he answered. ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.
22 So they asked, "Who are you? We need to give an answer to those who sent us. What do you say about yourself?" ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
23 He said, "I'm the voice of one crying out in the wilderness, 'Make straight the way of the Lord,' as the prophet Isaiah said." ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.
24 Now they had been sent from the Pharisees. ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.
25 They asked him, "Why baptize, then, if you're not the Christ, nor Elijah, nor the Prophet?" ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
26 John answered them, "I baptize with water, but among you stands one you do not know, ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.
27 even he who comes after me, whose sandal strap I am not worthy to untie." ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.
28 These things took place in Bethany across the Jordan, where John was baptizing. ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.
29 The next day, seeing Jesus coming toward him, he said, "Look! The Lamb of our Father—Jesus—who takes away the sin of the world! ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,
30 This is the one I meant: 'After me comes a man who ranks before me, because he was before me.' ‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.
31 I didn't know him, but I came baptizing with water so he would be revealed to Israel." ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.
32 John testified: "I saw the Holy Spirit descend from heaven like a dove and remain on him. ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
33 I didn't know him, but the one who sent me to baptize with water told me, 'The one you see the Holy Spirit come down and stay on—he is the one who baptizes with the Holy Spirit.' ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.
34 And I have seen and have borne witness that this is the Son of our Father." ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.
35 The next day John was standing again with two of his disciples, ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.
36 and looking at Jesus as he walked by, he said, "Look! The Lamb of our Father!" ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.
37 The two disciples heard him say this, and they followed Jesus. ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
38 Jesus turned, saw them following, and asked, "What do you seek?" They said, "Rabbi" (meaning Teacher), "where do you stay?" ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
39 He told them, "Come and you will see." So they went and saw where he was staying, and remained with him that day—about four in the afternoon. ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.
40 One of the two who heard John speak and followed Jesus was Andrew, Simon Peter's brother. ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.
41 He first found his own brother Simon and told him, "We've found the Messiah" (meaning Christ). ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,
42 He brought him to Jesus. Jesus looked at him and said, "You are Simon the son of John. You will be called Cephas" (meaning Peter). ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.
43 The next day, Jesus decided to leave for Galilee. He found Philip and said, "Follow me." ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.
44 Now Philip was from Bethsaida, the city of Andrew and Peter. ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.
45 Philip found Nathanael and told him, "We've found the one Moses wrote of in the Law and the prophets—Jesus, son of Joseph, from Nazareth." ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.
46 Nathanael said, "Can anything good come from Nazareth?" Philip said, "Come and see." “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.
47 Jesus saw Nathanael approaching and said of him, "Look—a true Israelite, with no deceit in him!" ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.
48 Nathanael asked him, "How do you know me?" Jesus answered, "Before Philip called you, while you were under the fig tree, I saw you." ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.
49 Nathanael answered him, "Rabbi, you are the Son of our Father! You are the King of Israel!" ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.
50 Jesus answered him, "You believe because I told you I saw you under the fig tree? You'll see greater things than these." ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.
51 He told him, "Truly, truly, I say to you, you will see heaven opened, and our Father's angels ascending and descending on the Son of Man." ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]