Skip to content
The Believer's Library

Biblica® Open Kannada Contemporary Version 2022

John 10 OKCV

Show OKCV only
Verse × ×
1 "Truly, truly, I tell you: whoever doesn't enter the sheepfold through the gate, but climbs in another way, is a thief and a robber. “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.
2 But the one who enters by the gate is the shepherd of the sheep. ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.
3 The gatekeeper opens for him, and the sheep hear his voice. He calls his own sheep by name and leads them out. ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
4 After bringing all his own out, he goes ahead of them, and the sheep follow him because they know his voice. ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
5 They will never follow a stranger—they'll run from him, since they don't know the voice of strangers." ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.
6 Jesus told them this figure of speech, but they didn't grasp what he meant. ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.
7 So Jesus said again, "Truly, truly, I tell you, I am the gate for the sheep. ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.
8 "All who came before me are thieves and robbers, but the sheep did not listen to them. ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9 I am the gate; whoever enters through me will be saved, going in and out, finding pasture. ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.
10 The thief comes only to steal, kill, and destroy. I came so they may have life, and have it in abundance. ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
11 "I am the good shepherd. The good shepherd lays down his life for the sheep. “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
12 The hired hand, not a shepherd, doesn't own the sheep. Seeing the wolf coming, he leaves the sheep and flees—the wolf snatches and scatters them. ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.
13 The man runs away because he is a hired hand and cares nothing for the sheep. ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.
14 "I am the good shepherd. I know my own and my own know me, “ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.
15 as the Father knows me and I know the Father, and I lay down my life for the sheep. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
16 I have other sheep not of this fold; I must lead them too, and they will hear my voice. They will become one flock, one shepherd. ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.
17 This is why the Father loves me: I lay down my life only to take it up again. ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.
18 No one takes it from me, but I lay it down on my own. I have authority to lay it down, and authority to take it up again. This charge I received from my Father." ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.
19 These words brought division among the Jews once again. ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.
20 Many of them said, "He is demon-possessed and out of his mind. Why listen to him?" ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.
21 But others said, "These aren't a demon-possessed man's words. Can a demon open blind eyes?" ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
22 Then came the Feast of Dedication at Jerusalem. It was winter, ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.
23 and Jesus was walking in the temple, in Solomon's Colonnade. ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.
24 The Jews surrounded him and said, "How long will you hold us in suspense? If you are the Christ, tell us plainly." ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.
25 Jesus answered, "I told you, and you don't believe. The works I do in my Father's name testify about me, ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
26 but you do not believe, because you are not my sheep. ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.
27 My sheep listen to my voice; I know them, and they follow me. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
28 I give them eternal life, and they will never perish, and no one will snatch them from my hand. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
29 My Father, who gave them to me, is greater than all; no one can snatch them out of the Father's hand. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.
30 I and the Father are one." ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.
31 Again the Jews picked up stones to stone him. ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.
32 Jesus replied, "I have shown you many good works from the Father. For which of these are you going to stone me?" ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.
33 "We're stoning you not for good work," they said, "but for blasphemy, because you, a mere man, claim to be God." ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.
34 Jesus answered them, "Is it not written in your Law: 'I have said you are gods'? ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?
35 If he called them 'gods,' to whom the word of my Father came—and Scripture cannot be broken, ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.
36 what about the one the Father set apart and sent into the world? Why accuse me of blasphemy for saying, 'I am the Son of our Father'? ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?
37 "If I am not doing the works of my Father, then do not believe me. ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ.
38 But if I do them, even if you won't believe me, believe the works, so you'll know and keep knowing the Father is in me, and I in the Father." ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.
39 Again they tried to seize him, but he escaped their grasp. ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.
40 Jesus then went back across the Jordan, to the place where John had first been baptizing, and stayed there. ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.
41 Many came to him, saying, "John performed no sign, but all John said about this man was true." ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.
42 And in that place many believed in him. ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]