Skip to content
The Believer's Library

Biblica® Open Kannada Contemporary Version 2022

John 11 OKCV

Show OKCV only
Verse × ×
1 A man named Lazarus was sick, from Bethany, the village of Mary and her sister Martha. ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
2 Mary—whose brother Lazarus was sick—anointed the Lord with fragrant oil and dried his feet with her hair. ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
3 So the sisters sent word to him, saying, "Lord, the one you love is sick." ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
4 Hearing this, Jesus said, "This sickness won't end in death, but is for the glory of our Father, so the Son of our Father may be glorified through it." ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.
5 Now Jesus loved Martha and her sister and Lazarus. ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.
6 So when he heard Lazarus was sick, he stayed two more days where he was. ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.
7 Then after this he said to the disciples, "Let us go back to Judea." ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.
8 The disciples said to him, "Rabbi, the Jews just now tried to stone you, and you're going back there?" ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.
9 Jesus answered, "Aren't there twelve hours in the day? Anyone who walks by day won't stumble - he sees the light of this world. ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.
10 But if anyone walks at night, he stumbles, because the light is not in him." ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.
11 After this, he told them, "Our friend Lazarus has fallen asleep, but I'm going to wake him." ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.
12 So the disciples said to him, "Lord, if he has fallen asleep, he will get better." ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.
13 Now Jesus had been speaking about his death, but they thought he meant natural sleep. ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
14 So then Jesus told them plainly, "Lazarus has died, ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.
15 I'm glad for your sake I wasn't there, so you'll believe. But let's go to him." ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.
16 So Thomas, called the Twin, told the other disciples, "Let's go too, and die with him." ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.
17 So when Jesus arrived, he found that Lazarus had already been in the tomb four days. ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.
18 Bethany was near Jerusalem, about two miles away, ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.
19 and many of the Jews had come to Martha and Mary to console them about their brother. ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.
20 When Martha heard Jesus was coming, she went to meet him; Mary stayed sitting in the house. ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.
21 Martha said to Jesus, "Lord, if you had been here, my brother would not have died. ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.
22 But even now I know that whatever you ask of our Father, he will give you." ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.
23 Jesus said to her, "Your brother will rise again." ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.
24 Martha said to him, "I know he'll rise again in the resurrection on the last day." ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.
25 Jesus told her, "I am the resurrection and the life. Whoever believes in me will live, even though he dies, ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
26 and everyone who lives and believes in me will never die. Do you believe this?" ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,
27 She said to him, "Yes, Lord; I believe you are the Christ, the Son of our Father, the one coming into the world." ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.
28 After saying this, she went and called her sister Mary privately: "The Teacher is here—he's calling for you." ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.
29 When Mary heard this, she rose quickly and went to him. ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.
30 Jesus had not yet entered the village; he was still where Martha met him. ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.
31 The Jews with her in the house, comforting her, saw Mary rise quickly and leave; they followed, thinking she was going to the tomb to weep there. ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.
32 Mary came to Jesus, saw him, fell at his feet, and said, "Lord, if you had been here, my brother would not have died." ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.
33 When Jesus saw her weeping, and the Jews who came with her also weeping, he groaned in spirit and was troubled. ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,
34 And he said, "Where have you laid him?" They said to him, "Lord, come and see." “ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.
35 Jesus wept. ಯೇಸು ಕಣ್ಣೀರಿಟ್ಟರು.
36 So the Jews said, "See how he loved him!" ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.
37 But some of them said, "Could this man who opened the blind man's eyes not have kept him from dying?" ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.
38 So Jesus, again deeply moved in himself, came to the tomb—a cave with a stone against it. ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.
39 Jesus said, "Take away the stone." Martha, the dead man's sister, said to him, "Lord, he must smell by now—he's been dead four days." ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.
40 Jesus said to her, "Didn't I tell you: if you believe you'll see our Father's glory?" ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.
41 So they removed the stone. Jesus looked up and said, "Father, I thank you that you heard me. ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
42 I knew you always hear me, but I said this for the crowd standing here, so they may believe you sent me." ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.
43 When he had said this, he cried out with a loud voice, "Lazarus, come out!" ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.
44 The dead man came out, feet and hands bound with strips of linen, and his face wrapped in cloth. Jesus said to them, "Untie him; let him go." ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.
45 So many of the Jews who came to Mary and saw what Jesus did believed in him. ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.
46 But some of them went to the Pharisees and told them what Jesus had done. ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.
47 So the chief priests and Pharisees convened the council and said, "What are we doing? For this man performs many signs. ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
48 If we leave him alone, everyone will believe in him, and the Romans will come and take away both our place and our nation." ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.
49 But one of them, Caiaphas, high priest that year, told them, "You know nothing at all. ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.
50 Don't you see it's better for you that one man die for the people than the whole nation perish?" ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.
51 He didn't say this on his own; as high priest that year, he prophesied Jesus would die for the nation, ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ
52 not only for the nation, but also to gather into one the scattered children of our Father. ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
53 So from that day on they plotted to put him to death. ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.
54 So Jesus no longer moved about openly among the Jews, but withdrew to a town called Ephraim near the wilderness, and stayed there with his disciples. ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.
55 The Jews' Passover was near, and many went up from the country to Jerusalem before it to purify themselves. ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
56 So they looked for Jesus, asking each other as they stood in the temple, "What do you think? Surely he won't come to the feast?" ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
57 The chief priests and Pharisees had ordered that anyone who knew his whereabouts must report it, so they could arrest him. ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]