Skip to content
The Believer's Library

Biblica® Open Kannada Contemporary Version 2022

John 12 OKCV

Show OKCV only
Verse × ×
1 Six days before Passover, Jesus came to Bethany, where Lazarus, whom Jesus raised from death, lived. ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.
2 There they gave him a dinner; Martha served, and Lazarus was one of those at the table with him. ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.
3 Mary took about a pint of pure nard perfume, expensive, and anointed Jesus' feet, then wiped his feet with her hair. The house filled with the fragrance of the perfume. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.
4 But Judas Iscariot, one of his disciples, the one who was about to betray him, said, ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,
5 "Why was this perfume not sold for about a year's wages and given to the poor?" “ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.
6 He said this not because he cared about the poor, but because he was a thief who kept the money box, taking what was put in it. ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.
7 So Jesus said, "Leave her alone. She has kept this for the day of my burial. ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.
8 You will always have the poor among you, but you will not always have me." ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.
9 A large crowd of Jews learned Jesus was there and came, not only for him but to see Lazarus, whom he had raised from the dead. ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.
10 So the chief priests planned to kill Lazarus as well, ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 because on account of him many of the Jews were going over and believing in Jesus. ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.
12 The next day, the large crowd that came for the feast heard Jesus was coming to Jerusalem. ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,
13 They took palm branches and went out to meet him, shouting, "Hosanna! Blessed is he who comes in the name of our Father—the King of Israel!" ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.
14 Jesus found a young donkey and rode on it, just as it is written: ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:
15 "Do not be afraid, daughter of Zion; look, your king is coming, seated on a donkey's colt." “ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.
16 His disciples didn't understand these things at first; but when Jesus was glorified, they remembered these things were written about him, and that they had done these things to him. ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.
17 The crowd that was with him when he called Lazarus from the tomb and raised him from the dead kept testifying. ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.
18 The crowd went to meet him because they heard he had done this sign. ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.
19 So the Pharisees said to each other, "See, you're accomplishing nothing—the whole world has gone after him." ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.
20 Now there were some Greeks among those who went up to worship at the feast. ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.
21 These came to Philip, from Bethsaida in Galilee, and asked him, "Sir, we want to see Jesus." ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.
22 Philip went and told Andrew; then Andrew and Philip went and told Jesus. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.
23 Jesus replied to them, "The hour has come for the Son of Man to be glorified. ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.
24 Truly, truly, I tell you, unless a wheat grain falls to the ground and dies, it stays alone; but if it dies, it bears much fruit. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.
25 Whoever loves his life loses it; whoever hates his life in this world keeps it for eternal life. ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.
26 Whoever serves me must follow me, so my servant will be where I am. Whoever serves me, my Father will honor him." ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.
27 "Now my soul is troubled. What should I say—'Father, save me from this hour'? But this is why I came to this hour. Father, glorify your name." “ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?
28 Then a voice came from heaven: "I have glorified it, and I will glorify it again." ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.
29 The crowd standing there heard it and said it thundered; others said an angel spoke to him. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.
30 Jesus said, "This voice came for your sake, not mine. ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.
31 Now is the judgment of this world; now the ruler of this world will be cast out. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.
32 And I, when I am lifted up from the earth, will draw all people to myself." ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.
33 He said this to show by what kind of death he was going to die. ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು.
34 The crowd replied, "We've heard from the Law that the Christ stays forever. How can you say the Son of Man must be lifted up? Who is this Son of Man?" ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.
35 So Jesus said, "The light is with you a little while longer. Walk while you have light, so darkness doesn't overtake you. Whoever walks in darkness doesn't know where he's going. ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.
36 While you have light, believe in the light, so you become children of light." Having said this, Jesus left and hid from them. ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.
37 Though he had performed so many signs in their presence, they still would not believe in him, ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.
38 so that the word of Isaiah the prophet would be fulfilled, which he spoke: "Father, who has believed our message? And to whom has the arm of our Father been revealed?" ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.
39 This is why they could not believe, for Isaiah said again: ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:
40 "He has blinded their eyes and hardened their heart, so that they would not see with their eyes, nor understand with their heart, nor turn—and I would heal them." “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”
41 Isaiah said these things because he saw Jesus' glory and spoke about him. ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.
42 Still, many even of the rulers believed in him, but they didn't admit it because of the Pharisees, so they wouldn't be expelled from the synagogue, ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.
43 for they loved the glory that comes from people more than the glory that comes from our Father. ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
44 Jesus cried out, "Whoever believes in me does not believe in me only, but in the one who sent me. ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.
45 And whoever sees me sees the one who sent me. ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.
46 I came into the world as light, so no one who believes in me stays in the darkness. ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 If anyone hears my words and doesn't keep them, I don't judge him—I didn't come to judge the world, but to save the world. “ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.
48 Whoever rejects me and doesn't accept my words already has a judge: my spoken word will judge him on the last day. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.
49 I have not spoken on my own; but the Father who sent me himself commanded me what to say and how to speak. ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.
50 I know his commandment is eternal life, so I say only what the Father told me to say." ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]