Skip to content
The Believer's Library

Biblica® Open Kannada Contemporary Version 2022

John 13 OKCV

Show OKCV only
Verse × ×
1 Now, before the Passover festival, Jesus knew his hour had come to leave this world to his Father. Having loved his own in the world, he loved them to the end. ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.
2 During supper, the devil had already put into Judas son of Simon Iscariot's heart the plan to betray Jesus. ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.
3 Jesus, knowing that the Father had given everything into his hands, and that he had come from him and was returning to him, ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
4 rose from supper, took off his outer clothes, picked up a towel, and tied it around his waist. ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು.
5 Then he poured water into a basin and began washing the disciples' feet, drying them with the towel tied around him. ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.
6 He came to Simon Peter, who said to him, "Lord, are you going to wash my feet?" ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.
7 Jesus answered him, "You do not realize now what I am doing, but later you will understand." ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.
8 "You will never wash my feet," Peter said. Jesus answered, "Unless I wash you, you share nothing with me." ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.
9 Simon Peter said to him, "Lord, not only my feet, but also my hands and head!" ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.
10 Jesus told him, "One who has bathed needs only to wash his feet—he is fully clean. You are clean, but not all of you." ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.
11 He knew who would betray him; that's why he said, "Not all of you are clean." ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.
12 After washing their feet and dressing, he reclined again and said to them, "Do you understand what I have done for you? ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ?
13 You call me Teacher and Lord, and rightly so, for that is what I am. ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14 So if I, your Lord and Teacher, washed your feet, you too must wash each other's feet. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15 For I have given you an example, that you should do as I have done for you. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.
16 Truly, truly, I say to you, a servant isn't greater than his master, nor a messenger greater than his sender. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17 If you know these things, you are blessed if you do them. ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18 "I don't mean all of you—I know those I've chosen. But Scripture must be fulfilled: 'The one eating my bread has raised his heel against me.' “ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.
19 I tell you now, before it happens, so you'll believe, once it happens, that I AM. “ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.
20 Truly, truly, I tell you, whoever welcomes someone I send welcomes me, and whoever welcomes me welcomes the one who sent me." ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”
21 After saying this, Jesus, troubled in spirit, testified, "Truly, truly, I tell you, one of you will betray me." ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.
22 The disciples looked at one another, at a loss to know which of them he meant. ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.
23 One of his disciples, the one Jesus loved, was reclining at his side. ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.
24 So Simon Peter motioned to him to ask which one Jesus meant. ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.
25 Leaning back against Jesus, he asked him, "Lord, who is it?" ಅವನು ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಸ್ವಾಮೀ, ಅವನು ಯಾರು?” ಎಂದು ಯೇಸುವನ್ನು ಕೇಳಿದನು.
26 Jesus answered, "It's the one I'll give this bread to, once I've dipped it." Then he dipped the bread and gave it to Judas, son of Simon Iscariot. ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.
27 After Judas took the bread, Satan entered into him. So Jesus told him, "Do quickly what you're doing." ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.
28 But no one reclining at the table understood why he said this to him. ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
29 Since Judas held the money bag, some thought Jesus meant, 'Buy what we need for the feast,' or, 'Give something to the poor.' ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.
30 As soon as Judas had taken the bread, he went out. And it was night. ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
31 After Judas left, Jesus said, "Now the Son of Man is glorified, and my Father is glorified in him. ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.
32 If my Father is glorified in him, my Father will also glorify the Son in himself and glorify him immediately. ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.
33 Dear children, I'm with you a little longer. You'll look for me, and as I told the Jewish leaders, so I tell you now: where I'm going, you can't come. “ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34 I give you a new command: love one another. As I have loved you, so you must love one another. “ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
35 By this everyone will know that you are my disciples, if you love one another." ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.
36 Simon Peter said to him, "Lord, where are you going?" Jesus answered, "Where I'm going you can't follow me now, but you'll follow later." ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.
37 Peter asked, "Lord, why can't I follow you now? I'll lay down my life for you." ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.
38 Jesus replied, "You will lay down your life for me? Truly, truly, I tell you: the rooster won't crow until you have denied me three times." ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]