Skip to content
The Believer's Library

Biblica® Open Kannada Contemporary Version 2022

John 15 OKCV

Show OKCV only
Verse × ×
1 "I am the true vine, and my Father is the gardener. “ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.
2 Every branch in me not bearing fruit, he removes; and every one bearing fruit, he prunes, so it bears more fruit. ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.
3 You are already clean because of the word I have spoken to you. ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
4 Remain in me, and I in you. As a branch can't bear fruit alone, unless it remains in the vine, neither can you unless you remain in me. ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
5 I am the vine, you the branches. Whoever remains in me, and I in them, bears much fruit, for apart from me you can do nothing. “ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
6 Anyone not remaining in me is thrown out like a branch and withers; branches are gathered, thrown into the fire, and burned. ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.
7 If you remain in me and my words remain in you, ask whatever you want, and it will happen for you. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.
8 This is how my Father is glorified: that you bear much fruit and prove to be my disciples. ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.
9 "As the Father has loved me, so I have loved you. Remain in my love. “ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
10 If you keep my commands, you will remain in my love, as I have kept my Father's commands and remain in his love. ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.
11 I've told you this so my joy may be in you, and your joy be complete. ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
12 "This is my command: love one another as I have loved you. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
13 No one has greater love than this: to lay down one's life for one's friends. ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
14 You are my friends if you do what I command you. ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.
15 I no longer call you servants—a servant doesn't know what his master does. I call you friends, since I've made known to you everything I heard from my Father. ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
16 You didn't choose me—I chose you and placed you to go, bear fruit that lasts, so whatever you ask the Father in my name, he'll give you. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.
17 This is my command to you: love one another. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.
18 "If the world hates you, know that it hated me first. “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.
19 If you were of the world, the world would love you as its own. But you are not of the world; instead, I chose you out of the world, so the world hates you. ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
20 Remember what I told you: a servant isn't greater than his master. If they persecuted me, they'll persecute you too; if they kept my word, they'll keep yours too. ‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.
21 But they'll do all this to you because of my name, since they don't know the one who sent me. ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
22 Had I not come and spoken to them, they would have no sin; now they have no excuse for their sin. ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.
23 Whoever hates me hates my Father as well. ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ.
24 Had I not done among them the works no one else did, they would have no sin. But now they have seen and hated both me and my Father. ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.
25 But this happened to fulfill what is written in their Law: 'They hated me without cause.' ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
26 "When the Helper comes, whom I will send you from the Father—the Spirit of truth proceeding from the Father—he will testify about me. “ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.
27 "And you also must testify, because you have been with me from the beginning." ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]