Skip to content
The Believer's Library

Biblica® Open Kannada Contemporary Version 2022

John 16 OKCV

Show OKCV only
Verse × ×
1 "I have told you all this so that you will not fall away. “ನೀವು ನಂಬಿಕೆಯಲ್ಲಿ ಎಡವಿಬಿದ್ದು ಹೋಗಬಾರದೆಂದು ನಾನು ಇವುಗಳನ್ನು ಹೇಳಿದ್ದೇನೆ.
2 They will expel you from synagogues; but the hour is coming when whoever kills you will think he offers a service to God. ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.
3 They will do this because they have not known the Father or me. ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.
4 But I've told you this so that when their hour comes, you'll remember I told you. I didn't tell you this from the start, because I was with you. ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ.
5 "But now I'm going to him who sent me, and none of you asks me, 'Where are you going?' ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.
6 Instead, because I have said these things to you, sorrow has filled your heart. ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.
7 I tell you the truth: my going is for your good. If I don't go, the Helper, the Holy Spirit, won't come to you. But if I go, I will send him to you. ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.
8 And when he comes, he will convict the world concerning sin and righteousness and judgment: ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.
9 concerning sin, because they do not believe in me; ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ
10 concerning righteousness, because I am going to my Father and you will see me no longer; ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ
11 concerning judgment, because the ruler of this world has been judged. ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.
12 "I still have many things to say to you, but you cannot bear them now. “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.
13 But when he, the Spirit of truth, comes, he will guide you into all truth. He won't speak on his own, but will speak whatever he hears, and will tell you what is coming. ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.
14 He will glorify me, for he will take what is mine and tell it to you. ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.
15 All my Father has is mine; that's why I said he takes from what is mine and will tell you. ತಂದೆಗೆ ಇರುವುದೆಲ್ಲವೂ ನನ್ನದೆ. ಆದ್ದರಿಂದಲೇ, ‘ಪವಿತ್ರಾತ್ಮ ದೇವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು,’ ಎಂದು ನಾನು ಹೇಳಿದೆನು.”
16 "Soon you'll no longer see me; then soon again you'll see me." “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ,” ಎಂದರು.
17 So some of his disciples asked each other, "What does he mean: 'In a little while you will not see me, and then in a little while you will see me,' and, 'Because I am going to the Father'?" ಆಗ ಅವರ ಶಿಷ್ಯರಲ್ಲಿ ಕೆಲವರು, “ಇವರು ನಮಗೆ ಹೇಳುವುದೇನು? ‘ಸ್ವಲ್ಪಕಾಲ ನೀವು ನನ್ನನ್ನು ಕಾಣುವುದಿಲ್ಲ ಮತ್ತು ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ,’ ಎನ್ನುತ್ತಾರಲ್ಲಾ?
18 So they kept saying, "What does he mean, 'a little while'? We don't know what he's talking about." ಇವರು ಹೇಳುವುದರ ಅರ್ಥವೇನು? ‘ಸ್ವಲ್ಪಕಾಲ’ ಎಂದು ಹೇಳುತ್ತಾರಲ್ಲ? ಇವರು ಏನು ಮಾತನಾಡುತ್ತಾರೋ ನಮಗೆ ತಿಳಿಯದು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
19 Jesus knew they wanted to ask him, so he said to them, "Are you asking each other what I meant by saying, 'In a little while you will not see me, and then a little while you will see me'? ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’
20 "Truly, truly, I tell you: you will weep and mourn, but the world rejoices. You'll grieve, but your grief will become joy. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.
21 A woman in labor has pain because her hour has come; but once she gives birth, she forgets the anguish, because she is joyful that a person has been born into the world. ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.
22 So you also have sorrow now, but I will see you again, and your heart will rejoice, and no one will take your joy from you. ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.
23 In that day you will ask me nothing. Truly, truly, I tell you: whatever you ask my Father in my name, he will give you. ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.
24 Until now you've asked nothing in my name. Ask, and you will receive, so your joy may be complete. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.
25 I've told you these things in figures. The hour is coming when I'll no longer speak in figures, but tell you plainly about my Father. “ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.
26 That day you'll ask in my name, and I'm not telling you I'll ask my Father on your behalf; ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ. ನಿಮ್ಮ ವಿಷಯವಾಗಿ ತಂದೆಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
27 for the Father himself loves you, because you've loved me and believed I came from our Father. ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.
28 I came from my Father and entered the world; again, I leave the world, going to my Father." ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.
29 His disciples said, "Now you are speaking plainly and not using any figure of speech! ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.
30 Now we know you know everything and need no one to ask you questions; so we believe you came from our Father." ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.
31 Jesus replied, "Do you now believe? ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?”
32 "See, the hour is coming—has come—when you'll be scattered, each to his own home, leaving me alone. Yet I'm not alone; my Father is with me. ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.
33 I've told you this so you may have peace in me. In the world you'll face trouble, but take heart—I've overcome the world." “ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]