Skip to content
The Believer's Library

Biblica® Open Kannada Contemporary Version 2022

John 17 OKCV

Show OKCV only
Verse × ×
1 After saying this, Jesus looked up to heaven and said: "Father, the hour has come. Glorify your Son, so the Son may glorify you, ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.
2 since you gave him authority over all people, to give eternal life to all you gave him. ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.
3 This is eternal life: that they know you, the only true Father, and Jesus Christ whom you sent. ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.
4 I glorified you on the earth, having finished the work you gave me to do. ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.
5 Father, glorify me now with yourself, with the glory I had with you before the world existed. ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.
6 I revealed your name to those you gave me from the world. They were yours; you gave them to me, and they have kept your word. “ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.
7 Now they know that everything you have given me is from you, ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8 for I gave them the words you gave me; they received them, truly knew I came from you, and believed you sent me. ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.
9 I pray for them, not for the world, but for those you gave me, since they are yours. ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು.
10 Everything mine is yours, and yours is mine, and I am glorified in them. ನನ್ನದೆಲ್ಲವೂ ನಿಮ್ಮದೇ. ನಿಮ್ಮದೆಲ್ಲವೂ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.
11 I'm no longer in the world, but they are in the world, and I'm coming to you. Holy Father, keep them in your name, the name you gave me, so they may be one as we are. ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.
12 While with them, I kept them in your name you gave me. I guarded them—none was lost except the son of destruction, so Scripture would be fulfilled. ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
13 Now I come to you, and I say these things in the world so they may have my joy completed in themselves. “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.
14 I've given them your word; the world hated them, since they're not of the world, just as I'm not of the world. ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15 I don't ask you to remove them from the world, but to guard them from the evil one. ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16 They are not of the world, just as I am not of the world. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17 Make them holy by truth; your word is truth. ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.
18 As you sent me into the world, so I have sent them into the world. ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19 For them I make myself holy, so they too may be made holy in truth. ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.
20 I pray not only for these, but also for those who will believe in me through their word. “ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ.
21 Father, let them all be one, as you're in me and I in you, so they're in us too, and the world believes you sent me. ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.
22 The glory you have given me, I have given them, so they may be one as we are one. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರುವಂತೆ ನೀವು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23 I in them and you in me, so they may be made completely one, so the world may know you sent me and loved them as you loved me. ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.
24 Father, I want those you gave me to be with me where I am, to see my glory, which you gave me because you loved me before the world was made. “ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.
25 Righteous Father—the world doesn't know you, but I know you, and these know you sent me. “ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.
26 I have made your name known to them, and will keep making it known, so the love you loved me with may be in them, and I in them." ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]