Skip to content
The Believer's Library

Biblica® Open Kannada Contemporary Version 2022

John 18 OKCV

Show OKCV only
Verse × ×
1 After saying these things, Jesus went out with his disciples across the Kidron Valley, where a garden stood; he and his disciples entered it. ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.
2 Judas the betrayer knew the place too, since Jesus often gathered there with his disciples. ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.
3 So Judas came there with a detachment of soldiers and officers from the chief priests and Pharisees, carrying lanterns, torches, and weapons. ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.
4 So Jesus, knowing all that was coming on him, went out and said to them, "Who are you looking for?" ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,
5 They answered him, "Jesus of Nazareth." Jesus said, "I AM." Judas, his betrayer, stood with them. ಅವರು ಯೇಸುವಿಗೆ, “ನಜರೇತಿನ ಯೇಸುವನ್ನು,” ಎಂದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು,” ಎಂದರು. ಅವರನ್ನು ಹಿಡಿದುಕೊಡಲಿದ್ದ ಯೂದನು ಸಹ ಅವರೊಂದಿಗೆ ನಿಂತಿದ್ದನು.
6 When Jesus said to them, "I AM," they drew back and fell to the ground. ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
7 So he asked them again, "Who are you looking for?" And they said, "Jesus of Nazareth." ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು.
8 Jesus answered, "I told you I AM. So if you're looking for me, let these men go." ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.
9 This fulfilled Jesus's own word: "I have not lost a single one of those you gave me." ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.
10 So Simon Peter drew his sword, struck the high priest's servant, and cut off his right ear—the servant named Malchus. ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ.
11 So Jesus told Peter, "Sheath your sword. Shouldn't I drink the cup my Father has given me?" ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.
12 Then the troops, their commander, and the Jewish officers seized Jesus and tied him up. ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.
13 They took him to Annas first, for he was father-in-law to Caiaphas, high priest that year. ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
14 Caiaphas was the one who advised the Jews: better one man die for the people. “ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ,” ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟ ಕಾಯಫನು ಇವನೇ.
15 Simon Peter and another disciple followed Jesus. That disciple was known to the high priest, so he entered with Jesus into the high priest's courtyard, ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.
16 but Peter stood outside at the door. So the other disciple, known to the high priest, went out, spoke to the servant girl who kept the door, and brought Peter in. ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
17 The servant girl guarding the door said to Peter, "You also are not one of this man's disciples, are you?" He said, "I'm not." ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.
18 The servants and officers, feeling the cold, had lit a charcoal fire and stood warming themselves; Peter stood with them, warming himself. ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.
19 The high priest then questioned Jesus about his disciples and his teaching. ಆಗ ಮಹಾಯಾಜಕನು ಯೇಸುವನ್ನು ಅವರ ಶಿಷ್ಯರ ವಿಷಯವಾಗಿಯೂ ಅವರ ಬೋಧನೆಯ ವಿಷಯವಾಗಿಯೂ ಪ್ರಶ್ನಿಸಿದನು.
20 Jesus answered him, "I spoke openly to the world; I always taught in synagogues and in the temple, where all the Jews gather. I said nothing in secret. ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.
21 Why ask me? Ask those who heard what I said to them; they know what I said." ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.
22 At this, one of the guards nearby slapped Jesus, saying, "Is that how you answer the high priest?" ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
23 Jesus answered him, "If I spoke wrongly, testify about the wrong; but if rightly, why do you strike me?" ಯೇಸು ಅವನಿಗೆ, “ನಾನು ಕೆಟ್ಟದ್ದನ್ನು ಮಾತನಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೆಯದನ್ನು ಮಾತನಾಡಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದರು.
24 Then Annas sent him, still bound, to Caiaphas the high priest. ಆಗ ಅನ್ನನು ಯೇಸುವನ್ನು ಕಟ್ಟಿಸಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
25 Simon Peter, meanwhile, stood warming himself. They said, "Aren't you also one of his disciples?" He denied it: "I'm not." ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.
26 One of the high priest's servants, a relative of the man whose ear Peter cut off, asked, "Didn't I see you with him in the garden?" ಮಹಾಯಾಜಕನ ಸೇವಕರಲ್ಲಿ ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ಕಾಣಲಿಲ್ಲವೋ?” ಎಂದು ಕೇಳಿದ್ದಕ್ಕೆ,
27 Peter again denied it, and at once a rooster crowed. ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು.
28 Then they led Jesus from Caiaphas to the governor's headquarters. It was early morning. They themselves didn't enter, so they wouldn't be made unclean but could eat the Passover. ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.
29 So Pilate went out to them and said, "What accusation do you bring against this man?" ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ,
30 They answered him, "If this man weren't doing wrong, we wouldn't have handed him over to you." ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.
31 Pilate said, "Take him yourselves and judge him by your own law." The Jews said, "We're not permitted to execute anyone." ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.
32 This fulfilled the word Jesus had spoken, showing what kind of death he was about to die. ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.
33 So Pilate went back into the headquarters, summoned Jesus, and asked, "Are you the King of the Jews?" ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
34 Jesus answered, "Are you saying this on your own, or did others tell you about me?" ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು.
35 Pilate replied, "Am I a Jew? Your own nation and chief priests handed you over to me. What have you done?" ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.
36 Jesus answered, "My kingdom isn't from this world. If it were, my servants would fight against my being handed to the Jews. But my kingdom isn't from here." ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.
37 Then Pilate said to him, "So you are a king?" Jesus answered, "You say I'm a king. I was born for this, and I came into the world for this—to testify to the truth. Everyone who belongs to the truth hears my voice." ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.
38 Pilate asked, "What is truth?" Then he went out to the Jews again and said, "I find nothing wrong in him. ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
39 But you have a custom: I release one man to you at Passover. So do you want me to release the King of the Jews to you?" ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.
40 They cried out again, "Not this man, but Barabbas!" Now Barabbas was a robber. ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]