Skip to content
The Believer's Library

Biblica® Open Kannada Contemporary Version 2022

John 19 OKCV

Show OKCV only
Verse × ×
1 Then Pilate took Jesus and had him flogged. ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.
2 The soldiers wove a crown of thorns, put it on his head, and wrapped a purple robe around him. ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,
3 They kept coming to him, saying, "Hail, King of the Jews!" and slapped his face. “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.
4 Pilate went out again and said to them, "Look, I'm bringing him out to you, so you'll know I find no fault in him." ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.
5 So Jesus came out wearing the crown of thorns and the purple robe. Pilate told them, "Here is the man!" ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.
6 When the chief priests and guards saw him, they shouted, "Crucify him! Crucify him!" Pilate told them, "Take him yourselves and crucify him, since I find no guilt in him." ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.
7 The Jews answered him, "We have a law; by that law he must die, because he made himself the Son of God." ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.
8 When Pilate heard this, he was even more afraid. ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.
9 He went into headquarters again and asked Jesus, "Where are you from?" But Jesus gave him no answer. ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.
10 So Pilate said to him, "You won't speak to me? Don't you know I have authority to release you, and authority to crucify you?" ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.
11 Jesus answered him, "You would have no authority over me at all unless it had been given you from above. That is why the one who handed me over to you bears the greater sin." ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.
12 From then on, Pilate tried to release him, but the Jews cried out, "If you release him, you're no friend of Caesar. Anyone who makes himself king opposes Caesar." ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.
13 Hearing these words, Pilate brought Jesus out and sat on the judgment seat at a place called Stone Pavement—Gabbatha in Aramaic. ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.
14 It was Passover Preparation Day, about noon. He told the Jews, "Here is your King!" ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.
15 They yelled, "Take him away! Take him away! Crucify him!" Pilate asked them, "Crucify your king?" The chief priests answered, "We have no king but Caesar." ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.
16 So then he handed him over to them to be crucified. So they took Jesus, ಆಗ ಪಿಲಾತನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕಾಗಿ ಅವರಿಗೆ ಒಪ್ಪಿಸಿದನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋದರು.
17 carrying his own cross, he went out to the place called The Place of a Skull, called Golgotha in Aramaic. ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.
18 There they crucified him, with two others, one on each side, Jesus in the middle. ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.
19 Pilate also wrote a sign and put it on the cross: Jesus of Nazareth, King of the Jews. ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.
20 Many Jews read this sign, since the place Jesus was crucified was near the city; it was written in Aramaic, Latin, and Greek. ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.
21 So the Jewish chief priests said to Pilate, "Don't write 'The King of the Jews,' but 'This man said, I am King of the Jews.'" ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.
22 Pilate answered, "What I have written, I have written." ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.
23 After crucifying Jesus, the soldiers took his clothes and split them into four shares, one per soldier, and took the tunic too. The tunic was seamless, woven in one piece from top to bottom. ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
24 So they said to each other, "Let's not tear it, but cast lots for who gets it." This was to fulfill the Scripture that says, "They divided my clothes among themselves, and cast lots for my garment." So the soldiers did this. ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.
25 His mother, his mother's sister, Mary wife of Clopas, and Mary Magdalene stood near Jesus' cross. ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
26 Seeing his mother and the disciple he loved standing there, Jesus told her, "Woman, here is your son." ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು.
27 Then he said to the disciple, "Here is your mother." From that hour, the disciple took her into his home. ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.
28 After this, knowing all was now finished, Jesus said, to fulfill Scripture, "I am thirsty." ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.
29 A jar full of sour wine sat there; they soaked a sponge in it, fixed it on a hyssop stalk, and lifted it to his mouth. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.
30 Jesus took the sour wine and said, "It is finished." He bowed his head and gave up his spirit. ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.
31 Since it was Preparation Day, and they didn't want the bodies remaining on the cross during the Sabbath—that Sabbath was a special day—the Jews asked Pilate to break their legs and remove the bodies. ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.
32 So soldiers came and broke the legs of the first man, then the other crucified with him. ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
33 But coming to Jesus, seeing he was already dead, they didn't break his legs. ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.
34 But one of the soldiers pierced his side with a spear, and blood and water immediately came out. ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.
35 The eyewitness has testified—his testimony is true, and he knows he speaks the truth—so you also may believe. ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.
36 For these things happened to fulfill the Scripture: "Not one of his bones will be broken." ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.
37 And again another Scripture says, "They will look on the one they have pierced." ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,” ಎಂದು ಹೇಳುತ್ತದೆ.
38 Afterward, Joseph of Arimathea—a disciple of Jesus, but secretly, for fear of the Jews—asked Pilate to let him remove Jesus' body. Pilate agreed, so he came and removed it. ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
39 Nicodemus, who had first come to Jesus at night, also came, bringing a mixture of myrrh and aloes, about seventy-five pounds. ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40 They took Jesus's body and wrapped it in linen cloths with spices, as is Jewish burial custom. ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಳುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರುಬಟ್ಟೆಗಳಲ್ಲಿ ಸುತ್ತಿದರು.
41 Where he was crucified there was a garden, and in the garden a new tomb where no one had yet been laid. ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.
42 Because it was the Jewish Preparation day, and the tomb was near, they laid Jesus there. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದಲೂ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವನ್ನು ಅಲ್ಲಿಯೇ ಸಮಾಧಿಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]