Skip to content
The Believer's Library

Biblica® Open Kannada Contemporary Version 2022

John 2 OKCV

Show OKCV only
Verse × ×
1 On the third day, a wedding took place in Cana of Galilee; Jesus's mother was there. ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 Jesus and his disciples were also invited to the wedding. ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.
3 When the wine ran out, the mother of Jesus said to him, "They have no wine." ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.
4 "Woman, why are you bringing me into this?" Jesus replied. "My hour has not yet come." ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.
5 His mother said to the servants, "Do whatever he tells you." ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.
6 Six stone water jars stood there, used for Jewish purification, each holding twenty to thirty gallons. ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.
7 Jesus said to them, "Fill the jars with water," so they filled them to the brim. ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 He told them, "Draw some out now, and take it to the head steward." So they did. ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.
9 The master of the banquet tasted the water now wine, not knowing its source—though the servants who drew it knew. So he called the bridegroom aside, ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 and said, "Everyone serves the good wine first, then the lesser once guests are drunk. But you've kept the good wine till now." “ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.
11 Jesus performed this first sign at Cana in Galilee. He revealed his glory, and his disciples believed in him. ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
12 After this he went down to Capernaum with his mother, brothers, and disciples, and stayed there a few days. ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.
13 When the Jewish Passover was near, Jesus went up to Jerusalem. ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.
14 In the temple courts he found sellers of cattle, sheep, and doves, and others sitting at tables exchanging money. ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.
15 He made a whip of cords and drove them all out of the temple courts, sheep and cattle alike, poured out the money-changers' coins, and overturned their tables. ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.
16 To the dove sellers he said, "Take these out of here! Don't make my Father's house a marketplace." ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.
17 His disciples remembered that it is written: "Zeal for your house will consume me." ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.
18 So the Jews asked, "What sign will you show us for doing these things?" ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 Jesus answered them, "Destroy this temple, and in three days I will raise it up." ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
20 They replied, "This temple took forty-six years to build, and will you raise it in three days?" ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.
21 But the temple he had spoken of was his body. ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.
22 After he rose from the dead, his disciples remembered he had said this, and believed the Scripture and the word Jesus had spoken. ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.
23 While he was in Jerusalem at the Passover, many saw the signs he did and trusted in his name. ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.
24 But Jesus would not entrust himself to them, for he knew all people. ಆದರೆ ಯೇಸು ಎಲ್ಲರನ್ನೂ ಅರಿತವರಾದ್ದರಿಂದ ತಮ್ಮನ್ನು ಒಪ್ಪಿಸಿಕೊಡಲಿಲ್ಲ.
25 He didn't need anyone's testimony about people—he knew what was in each one. ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]