Skip to content
The Believer's Library

Biblica® Open Kannada Contemporary Version 2022

John 21 OKCV

Show OKCV only
Verse × ×
1 Afterward Jesus showed himself again to the disciples by the Sea of Tiberias—this is how he showed himself. ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:
2 Simon Peter, Thomas called Twin, Nathanael from Cana in Galilee, Zebedee's sons, and two other disciples were together. ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
3 Simon Peter told them, "I'm going fishing." "We'll go with you," they said. So they went out and got into the boat, but caught nothing that night. ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 At daybreak Jesus stood on the shore, yet the disciples didn't know it was Jesus. ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.
5 Jesus said to them, "Children, do you have any fish?" They answered him, "No." ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು.
6 He told them, "Cast the net on the boat's right side, and you'll find fish." So they cast it, and were no longer able to haul it in for the sheer number of fish. ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.
7 The disciple Jesus loved told Peter, "It's the Lord!" Hearing it was the Lord, Simon Peter wrapped his coat around him—he'd taken it off to work—and threw himself into the sea. ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 The other disciples came in the boat, dragging the net full of fish, since they were only about one hundred yards from shore. ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು.
9 When they went ashore, they saw a charcoal fire with fish on it, and bread. ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.
10 Jesus said to them, "Bring some of the fish you have just caught." ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ,” ಎಂದರು.
11 So Simon Peter climbed aboard and dragged the net ashore, full of 153 large fish; despite so many, it didn't tear. ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.
12 Jesus said to them, "Come, eat breakfast." None of the disciples dared ask him, "Who are you?"—they knew it was the Lord. ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 Jesus came, took the bread, and gave it to them, and the fish as well. ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು.
14 This was now the third time Jesus revealed himself to the disciples after being raised from the dead. ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 After they ate breakfast, Jesus asked Simon Peter, "Simon, son of John, do you love me with all your heart, more than these?" He answered, "Yes, Lord, you know I love you as a friend." Jesus told him, "Feed my lambs." ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.
16 A second time Jesus asked, "Simon son of John, do you love me with all your heart?" He replied, "Yes, Lord, you know I love you as a friend." Jesus said, "Take care of my sheep." ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು.
17 A third time Jesus said to him, "Simon son of John, do you love me as a friend?" Peter was hurt that Jesus asked him a third time, "Do you love me as a friend?" and said, "Lord, you know everything; you know that I love you as a friend." Jesus said to him, "Feed my sheep." ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.
18 "Truly, truly, I tell you: when you were young, you dressed yourself and went where you wanted; but when you're old, you'll stretch out your hands, and another will dress you and take you where you don't want to go." ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.
19 Jesus said this to show by what kind of death Peter would glorify our Father. Then he told him, "Follow me." ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
20 Peter turned and saw the disciple Jesus loved following—the one who leaned back against Jesus at supper and asked, "Lord, who is going to betray you?" ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.
21 When Peter saw him, he said to Jesus, "Lord, what about this man?" ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು.
22 Jesus told him, "If I want him to remain until I come, what's that to you? You follow me." ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.
23 So this word spread among the brothers and sisters that this disciple would not die. Yet Jesus did not tell him he would not die, but, "If I want him to remain until I come, what is that to you?" ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.
24 This is the disciple testifying to these things and who wrote them; we know his testimony is true. ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 Jesus did many other things too. If each were written down, I don't think the world itself could hold the books written. ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]