Skip to content
The Believer's Library

Biblica® Open Kannada Contemporary Version 2022

John 3 OKCV

Show OKCV only
Verse × ×
1 Now there was a man of the Pharisees named Nicodemus, a ruler of the Jews. ಯೆಹೂದ್ಯರ ಆಡಳಿತ ಮಂಡಳಿಯ ಸದಸ್ಯನೂ ಫರಿಸಾಯನೂ ಆದ ನಿಕೊದೇಮನೆಂಬ ಮನುಷ್ಯನಿದ್ದನು.
2 This man came to Jesus at night and said, "Rabbi, we know you are a teacher who has come from our Father, for no one can do these signs you do unless our Father is with him." ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.
3 Jesus answered, "Truly, truly, I tell you: unless someone is born from above, he can't see the kingdom of our Father." ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”
4 Nicodemus asked, "How can a man be born when he's old? Can he enter his mother's womb again and be born?" ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.
5 Jesus answered, "Truly, truly, I tell you, unless one is born of water and the Holy Spirit, he can't enter our Father's kingdom. ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
6 Born of the flesh is flesh, and born of the Holy Spirit is spirit. ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.
7 Don't be amazed that I said to you, 'You must be born from above.' ‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
8 Wind blows where it wants; you hear its sound but don't know where it comes from or where it goes. So it is with everyone born of the Spirit." ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.
9 Nicodemus said to him, "How can these things be?" ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.
10 Jesus answered him, "Are you the teacher of Israel and yet you do not understand these things? ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?
11 Truly, truly, I tell you: we speak what we know, we testify to what we've seen, yet you don't accept our testimony. ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 If I told you earthly things and you don't believe, how will you believe if I tell you heavenly things? ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 No one has ascended into heaven except the one who descended from heaven, the Son of Man. ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.
14 As Moses lifted up the serpent in the wilderness, so the Son of Man must be lifted up, ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.
15 that whoever believes in him may have eternal life. ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.”
16 For our Father so loved the world that he gave his one and only Son, that whoever believes in him will not perish but have eternal life. ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
17 For our Father did not send his Son into the world to condemn the world, but so the world could be saved through him. ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.
18 Whoever believes in him isn't condemned; whoever doesn't believe is condemned already, for not believing in the name of the one and only Son of our Father. ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19 This is the judgment: light has entered the world, and people loved darkness more than light because their deeds were evil. ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
20 Everyone who does evil hates the light and won't come to the light, so that his deeds aren't exposed. ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
21 But whoever does the truth comes to the light, so it may be revealed that his works have been done in our Father." ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.
22 After this, Jesus and his disciples went into the Judean countryside, where he stayed with them, baptizing. ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.
23 John also baptized at Aenon near Salim, since water was plentiful there, and people came and were baptized, ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24 for John had not yet been put in prison. ಆಗ ಯೋಹಾನನು ಇನ್ನೂ ಸೆರೆಯಲ್ಲಿ ಬಂಧಿತನಾಗಿರಲಿಲ್ಲ.
25 Now a discussion arose between some of John's disciples and a Jew over purification. ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.
26 They came to John and said, "Rabbi, the man with you beyond the Jordan, the one you testified about—he's baptizing, and everyone goes to him." ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.
27 John replied, "A person cannot receive even one thing unless it is given him from heaven. ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.
28 You yourselves can testify: I said 'I'm not the Christ, but sent ahead of him.' ‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.
29 The one with the bride is the bridegroom—Jesus. The bridegroom's friend, who stands and hears him, rejoices greatly at the bridegroom's voice. So my joy is now complete. ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
30 He must increase, but I must decrease." ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.
31 The one who comes from above is above all. The one from earth belongs to earth and speaks in an earthly way. The one who comes from heaven is above all. “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.
32 He bears witness to what he has seen and heard, yet no one receives his testimony. ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33 Whoever receives his testimony confirms that our Father is true. ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.
34 The one our Father sent speaks our Father's words, for he gives the Holy Spirit without measure. ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.
35 Our Father loves the Son and has given all things into his hand. ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.
36 Whoever believes in the Son has eternal life; whoever disobeys the Son won't see life—our Father's wrath remains on him. ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]