Skip to content
The Believer's Library

Biblica® Open Kannada Contemporary Version 2022

John 5 OKCV

Show OKCV only
Verse × ×
1 After this there was a feast of the Jews, and Jesus went up to Jerusalem. ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.
2 By the Sheep Gate in Jerusalem is a pool with five covered porches, called Bethesda in Aramaic. ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.
3 In these lay a multitude of the sick—blind, lame, and paralyzed. ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.
4 Not in this edition ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.
5 One man was there who had been sick for thirty-eight years. ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.
6 Seeing him lying there and knowing he had already been there a long time, Jesus asked, "Do you want to be healed?" ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.
7 The sick man answered him, "Sir, I have no one to put me in the pool once the water stirs—while I'm on my way, someone else gets in first." ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.
8 Jesus said to him, "Get up, take up your mat, and walk." ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ,” ಎಂದರು.
9 At once the man became well, picked up his mat, and walked. That day was the Sabbath. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.
10 So the Jews told the healed man, "It's the Sabbath—you're not allowed to carry your mat." ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.
11 He answered them, "The man who healed me told me, 'Take up your mat and walk.'" ಆದರೆ ಅವನು ಅವರಿಗೆ, “ನನ್ನನ್ನು ಸ್ವಸ್ಥಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದ್ದಾರೆ,” ಎಂದನು.
12 They asked him, "Who is the man who told you, 'Take it up and walk'?" ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
13 But the healed man didn't know who it was, since Jesus had slipped away into the crowd there. ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು.
14 Later Jesus found him in the temple and said, "You are healed now. Stop sinning, or something worse may happen to you." ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.
15 The man went away and told the Jews that it was Jesus who had made him well. ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
16 And so the Jews began persecuting Jesus, because he was doing these things on the Sabbath. ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.
17 But Jesus answered them, "My Father is working until now, and I too am working." ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು.
18 So the Jews sought even more to kill him: he not only broke the Sabbath but called our Father his own Father, making himself equal to him. ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.
19 So Jesus said to them, "Truly, truly, I tell you: the Son can do nothing on his own, but only what he sees the Father doing. Whatever the Father does, the Son does the same. ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.
20 "For the Father loves the Son and shows him everything he does; he will show him greater works than these, so you will be amazed. ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.
21 For as the Father raises the dead and gives life, so the Son too gives life to anyone he wants. ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.
22 For the Father judges no one, but has entrusted all judgment to the Son, ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.
23 so everyone honors the Son as they honor the Father; whoever doesn't honor the Son doesn't honor the Father who sent him. ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
24 Truly, truly, I tell you: whoever hears my word and believes the one who sent me has eternal life and won't face judgment—they have passed from death to life. “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
25 Truly, truly, I tell you, an hour comes, and is now here, when the dead will hear the voice of the Son of our Father, and those hearing will live. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
26 For as the Father has life in himself, he gave the Son to also have life in himself. ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.
27 And he has given him authority to execute judgment, because he is the Son of Man. ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.
28 Don't be astonished at this—an hour is coming when everyone in the tombs will hear his voice, “ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.
29 and come out—those who did good, to the resurrection of life; those who did evil, to the resurrection of judgment. ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.
30 By myself I can do nothing. I judge as I hear; my judgment is fair, because I seek not my own will but the will of the One who sent me. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.
31 "If I testify about myself, my testimony is not valid. “ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
32 There is another who testifies about me, and I know his testimony about me is true. ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.
33 You sent messengers to John, and he has testified to the truth. “ನೀವು ಯೋಹಾನನ ಬಳಿಗೆ ದೂತರನ್ನು ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
34 Not that I accept human testimony, but I say these things so that you may be saved. ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.
35 John was a burning, shining lamp, and you were willing to rejoice briefly in his light. ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.
36 But I have testimony greater than John's: the works my Father gave me to finish—the very works I'm doing—testify that my Father sent me. “ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.
37 And my Father who sent me has himself testified about me. You've never heard his voice or seen his form, ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.
38 and you don't have his word remaining in you, since you don't believe the one he sent. ಅವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವರು ಕಳುಹಿಸಿದವನನ್ನು ನೀವು ನಂಬುವುದಿಲ್ಲ.
39 You search the Scriptures, thinking they hold eternal life—yet they themselves testify about me, ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.
40 yet you refuse to come to me so that you may have life. ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.
41 I do not accept glory from people, “ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.
42 but I know you—that you do not have the love of our Father within you. ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.
43 I have come in my Father's name, and you don't receive me; if another comes in his own name, you'll receive him. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.
44 How can you believe, when you accept glory from one another and don't seek the glory from the only God? ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?
45 Don't think I will accuse you before my Father. Moses, in whom you've hoped, accuses you. “ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.
46 For if you believed Moses, you would believe me, because he wrote about me. ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.
47 But if you do not believe his writings, how will you believe my words?" ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]