Skip to content
The Believer's Library

Biblica® Open Kannada Contemporary Version 2022

John 6 OKCV

Show OKCV only
Verse × ×
1 After this, Jesus crossed the Sea of Galilee, also called the Sea of Tiberias. ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.
2 A large crowd followed him, because they saw the signs he performed on the sick. ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.
3 Jesus went up on the mountainside and sat down there with his disciples. ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.
4 Now the Passover, the feast of the Jews, was near. ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.
5 Looking up, Jesus saw a large crowd approaching and asked Philip, "Where can we buy bread for these people to eat?" ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.
6 He said this to test Philip, for he himself already knew what he was going to do. ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.
7 Philip answered him, "200 days' wages of bread isn't enough for each of them to get a little." ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.
8 One of his disciples, Andrew, Simon Peter's brother, said to him, ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು
9 "A boy here has five barley loaves and two fish—but what's that for so many?" ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.
10 Jesus said, "Have the people sit down." Much grass grew there, so about 5,000 men sat down. ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.
11 Jesus then took the loaves, gave thanks, and distributed them to those seated; likewise with the fish, as much as they wanted. ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.
12 When they were full, he told his disciples, "Gather the leftover pieces, so nothing is lost." ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.
13 So they gathered the fragments left over from the five barley loaves after the people ate, filling twelve baskets. ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.
14 So when the people saw the sign he did, they said, "This really is the Prophet coming into the world!" ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.
15 Knowing they meant to come and seize him to make him king, Jesus withdrew again to the mountain alone. ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.
16 When evening came, his disciples went down to the sea, ಸಂಜೆಯಾದಾಗ ಯೇಸುವಿನ ಶಿಷ್ಯರು ಸರೋವರಕ್ಕೆ ಹೋಗಿ,
17 got in a boat and headed across the sea to Capernaum. It was already dark, and Jesus had not yet reached them. ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18 A strong wind was blowing, and the sea grew rough. ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.
19 After rowing three or four miles, they saw Jesus walking on the water, approaching the boat, and were afraid. ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.
20 But he said to them, "It is I; do not be afraid." ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.
21 So they were glad to take him into the boat, and instantly it reached the shore they were heading toward. ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.
22 The next day, the crowd remaining on the far shore saw that only one boat had been there, that Jesus had not boarded it with his disciples, but that his disciples had gone off alone. ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.
23 Other boats came from Tiberias near the place where they ate bread after the Lord gave thanks. ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24 So when the crowd saw Jesus and his disciples weren't there, they got in boats and went to Capernaum to look for Jesus. ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25 Finding him across the sea, they asked, "Rabbi, when did you get here?" ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.
26 Jesus answered them, "Truly, truly, I tell you: you seek me not because you saw signs, but because you ate the loaves and were filled. ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
27 Don't work for food that spoils, but for food that lasts to eternal life, which the Son of Man will give you. For on him our Father has set his seal." ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.
28 Then they said to him, "What must we do to be doing the works of our Father?" ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,
29 Jesus answered them, "This is our Father's work: that you believe in the one he sent." ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.
30 So they asked him, "What sign will you give, so we may see and believe you? What work will you do? ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?
31 Our ancestors ate manna in the wilderness, as it is written: 'He gave them bread from heaven to eat.'" ‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.
32 Jesus told them, "Truly, truly, I tell you: Moses didn't give you the bread from heaven—my Father gives you the true bread from heaven. ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.
33 For the bread of our Father is he who comes down from heaven and gives the world life." ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.
34 So they said to him, "Lord, give us this bread always." ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.
35 Jesus told them, "I am the bread of life. Whoever comes to me will never hunger; whoever believes in me will never thirst. ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
36 But as I told you, you have seen me and still do not believe. ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.
37 All the Father gives me will come to me, and the one who comes to me I will never drive away. ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
38 For I came down from heaven not to do my own will, but the will of him who sent me. ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.
39 This is the will of him who sent me: that I lose none of all he has given me, but raise them up on the last day. ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.
40 For this is the will of my Father: that everyone who looks to the Son and believes in him should have eternal life, and I will raise them up on the last day." ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.
41 So the Jews grumbled about him because he said, "I am the bread that came down from heaven." “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
42 They said, "Isn't this Jesus, Joseph's son, whose father and mother we know? How can he now say, 'I have come down from heaven'?" “ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.
43 Jesus answered them, "Stop grumbling among yourselves. ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.
44 "No one can come to me unless the Father who sent me draws him, and I will raise him on the last day. ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
45 It is written in the Prophets: 'And they will all be taught by our Father.' Everyone who has heard and learned from the Father comes to me. ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
46 Not that anyone has seen the Father except the one from him; he has seen the Father. ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.
47 Truly, truly, I tell you, whoever believes has eternal life. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.
48 I am the bread of life. ನಾನೇ ಜೀವದ ರೊಟ್ಟಿ.
49 Your ancestors ate the manna in the wilderness, yet they died. ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.
50 This is the bread that comes down from heaven, so anyone may eat it and not die. ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.
51 I am the living bread come down from heaven. Whoever eats this bread will live forever. The bread I will give is my flesh, for the life of the world." ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.
52 Then the Jews argued sharply among themselves, "How can this man give us his flesh to eat?" ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.
53 Jesus told them, "Truly, truly, I tell you, unless you eat the flesh of the Son of Man and drink his blood, you have no life in yourselves. ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
54 Whoever feeds on my flesh and drinks my blood has eternal life, and I will raise him on the last day. ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
55 For my flesh is true food, and my blood is true drink. ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
56 Whoever feeds on my flesh and drinks my blood remains in me, and I in him. ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.
57 As the living Father sent me and I live because of the Father, so whoever feeds on me will live because of me. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.
58 This is the bread that came down from heaven. It is not like the bread your ancestors ate and still died. Whoever feeds on this bread will live forever." ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.
59 He said these things while teaching in the synagogue at Capernaum. ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.
60 On hearing it, many of his disciples said, "This is a hard teaching. Who can accept it?" ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.
61 Aware that his disciples were grumbling about this, Jesus said to them, "Does this offend you? ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?
62 "Then what if you see the Son of Man ascending to where he was before? ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63 The Spirit gives life; the flesh helps nothing. The words I have spoken to you are spirit and life. ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
64 But some of you don't believe." For Jesus knew from the start who didn't believe, and who would betray him. ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.
65 And he said, "This is why I told you: no one can come to me unless the Father enables him." ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”
66 From this time many of his disciples turned back and no longer walked with him. ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
67 So Jesus asked the Twelve, "Do you want to leave too?" ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,
68 Simon Peter answered him, "Lord, to whom should we go? You have the words of eternal life. ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.
69 We have believed and known you are the Holy One of our Father." ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.
70 Jesus answered them, "Have I not chosen you, the Twelve? Yet one of you is a devil." ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.
71 He meant Judas, son of Simon Iscariot, one of the Twelve, who was about to betray him. ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]