Skip to content
The Believer's Library

Biblica® Open Kannada Contemporary Version 2022

John 8 OKCV

Show OKCV only
Verse × ×
1 But Jesus went to the Mount of Olives. ಯೇಸುವಾದರೋ ಓಲಿವ್ ಮರಗಳ ಗುಡ್ಡಕ್ಕೆ ಹೋದರು.
2 At dawn he came again to the temple; all the people came to him, and he sat down and taught them. ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.
3 The scribes and Pharisees brought a woman caught in adultery and stood her in the middle. ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.
4 They said to him, "Teacher, this woman was caught in the act of adultery. ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.
5 Now in the Law, Moses commanded us to stone such women. So what do you say? ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು.
6 They said this to test him, seeking grounds to accuse him. But Jesus bent down and wrote on the ground with his finger." ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.
7 When they kept questioning him, he stood up and said to them, "Whichever of you has no sin, cast the first stone at her." ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.
8 And once more he bent down and wrote on the ground. ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.
9 Hearing this, they left one by one, starting with the oldest, until Jesus was left alone with the woman standing there. ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
10 Jesus stood up and said to her, "Woman, where are they? Has no one condemned you?" ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು.
11 She said, "No one, Lord." Jesus said, "I don't condemn you either. Go, and from now on, don't sin anymore." ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.
12 Jesus spoke to them again: "I am the world's light. Whoever follows me will never walk in darkness but will have the light of life." ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.
13 So the Pharisees said to him, "You are bearing witness about yourself; your testimony is not true." ಫರಿಸಾಯರು ಯೇಸುವಿಗೆ, “ನಿನ್ನ ವಿಷಯವಾಗಿ ನೀನೇ ಸಾಕ್ಷಿ ನೀಡುತ್ತಿರುವೆ, ನಿನ್ನ ಸಾಕ್ಷಿಯು ಸತ್ಯವಾದುದ್ದಲ್ಲ,” ಎಂದು ಹೇಳಿದರು.
14 Jesus replied, "Even if I testify about myself, my testimony is true, because I know where I came from and where I'm going; but you don't know where I come from or where I'm going. ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.
15 You judge according to the flesh; I judge no one. ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
16 Even if I judge, my judgment is true, since I do not judge alone, but I and the Father who sent me. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
17 In your Law it is written that the testimony of two people is true. ‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ.
18 I testify about myself, and the Father who sent me testifies about me." ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು.
19 They asked, "Where is your Father?" Jesus answered, "You know neither me nor my Father. If you knew me, you would know my Father also." ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.
20 He said this while teaching in the temple, in the treasury; no one seized him—his hour had not yet come. ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.
21 So he told them again, "I am going away. You will look for me and die in your sin. Where I am going, you cannot come." ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.
22 So the Jews said, "Will he kill himself, since he says, "You can't come where I'm going"?" ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.
23 He said to them, "You're from below; I'm from above. You're of this world; I'm not of this world. ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
24 I told you that you'll die in your sins; if you don't believe I AM, you'll die in your sins." ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.
25 So they said to him, "Just who are you?" Jesus said to them, "Exactly what I've said from the start. ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.
26 I have much to say and judge about you, but the One who sent me is true; what I heard from him, I tell the world." ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.
27 They did not understand that he had been speaking to them about the Father. ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.
28 So Jesus told them, "When you lift up the Son of Man, then you'll know that I AM, and that I do nothing on my own, but say these things as the Father taught me. ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.
29 The one who sent me is with me; he hasn't left me alone, because I always do what pleases him." ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.
30 As he was saying these things, many believed in him. ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು.
31 Jesus then told the Jews who had believed him, "If you remain in my word, you are truly my disciples, ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.
32 and you will know the truth, and the truth will set you free." ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.
33 They answered him, "We are Abraham's descendants, never enslaved to anyone. How can you say, 'You will become free'?" ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.
34 Jesus answered them, "Truly, truly, I tell you: everyone who keeps sinning is sin's slave. ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.
35 The slave does not remain in the house forever; the son remains forever. ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ.
36 So if the Son sets you free, you will be free indeed. ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.
37 I know you are Abraham's descendants; yet you seek to kill me because my word has no space in you. ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.
38 I speak what I've seen with my Father, and you do what you heard from your father." ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.
39 They answered, "Abraham is our father." Jesus said, "If you were Abraham's children, you'd do the works Abraham did, ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.
40 but now you want to kill me—a man who told you the truth I heard from my Father. Abraham didn't do this. ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.
41 You do your father's works." They said to him, "We weren't born of sexual sin. We have one Father—God himself." ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.
42 Jesus said to them, "If God were your Father, you'd love me, for I came from God and am here. I didn't come on my own—he sent me. ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.
43 Why don't you understand my speech? Because you cannot bear to hear my word. ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.
44 You belong to your father, the devil, and want to carry out his desires. He was a murderer from the beginning, not standing in truth, since no truth is in him. When he lies, he speaks from his own nature, since he's a liar and the lie's father. ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.
45 But because I tell the truth, you do not believe me. ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.
46 Who among you convicts me of sin? If I speak truth, why don't you believe me? ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?
47 Whoever is from our Father hears his words; you don't hear because you're not from our Father." ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.
48 The Jews replied, "Aren't we right in saying that you are a Samaritan and have a demon?" ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.
49 Jesus answered, "I do not have a demon, but I honor my Father, and you dishonor me. ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.
50 But I'm not seeking my own glory; our Father seeks it, and he judges. ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ. ನನಗೆ ಮಹಿಮೆಯನ್ನು ಹುಡುಕುವವರು ಒಬ್ಬರಿದ್ದಾರೆ ಅವರೇ ನ್ಯಾಯತೀರಿಸುವವರು.
51 Truly, truly, I say to you, if anyone keeps my word, he will never see death." ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.
52 The Jews said to him, "Now we know you have a demon. Abraham died, as did the prophets, yet you say, 'Whoever keeps my word will never taste death.' ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?
53 Are you greater than our father Abraham, who died? The prophets died too! Who do you claim to be?" ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.
54 Jesus answered, "If I glorify myself, my glory is nothing. It is my Father who glorifies me, of whom you say, 'He is our God.' ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.
55 You don't know him, but I know him. If I said I didn't know him, I'd be a liar like you. But I know him and keep his word. ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.
56 Your father Abraham rejoiced that he would see my day. He saw it and was glad." ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.
57 So the Jews said to him, "You're not yet fifty years old, and you've seen Abraham?" ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ಕಂಡಿದ್ದೀಯಾ?” ಎಂದರು.
58 Jesus said to them, "Truly, truly, I say to you, before Abraham was, I AM." ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.
59 So they grabbed stones to throw at him, but Jesus hid himself and slipped out of the temple. ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]