Skip to content
The Believer's Library

Biblica® Open Kannada Contemporary Version 2022

Jonah 1 OKCV

Show OKCV only
Verse × ×
1 Now the word of our Father came to Jonah son of Amittai: ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:
2 "Get up, go to Nineveh, that great city, and cry out against it, for their evil has risen before me." “ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.
3 But Jonah set out to flee to Tarshish, away from our Father's presence. He went down to Joppa, found a ship bound for Tarshish, paid its fare, and boarded to go with them to Tarshish, away from our Father's presence. ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.
4 Then our Father hurled a great wind at the sea; a violent storm arose, and the ship seemed about to break apart. ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.
5 The sailors were terrified, each crying to his own god. They threw the ship's cargo into the sea to lighten it. But Jonah had gone below deck, where he lay fast asleep. ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.
6 The captain came and said, "How can you sleep? Get up, call on your god! Maybe he will notice us, and we won't perish." ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.
7 The men said to each other, "Come, let's cast lots to find who's to blame for this disaster on us." They cast lots, and it fell on Jonah. ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.
8 They said to him, "Tell us—you who have brought this disaster on us—what do you do? Where do you come from? What is your country? What people are you from?" ಆಗ ಅವರು ಅವನಿಗೆ, “ನಮಗಾಗಿ ಈ ಕಷ್ಟವನ್ನೆಲ್ಲಾ ಉಂಟುಮಾಡಿದ್ದಕ್ಕೆ ಯಾರು ಜವಾಬ್ದಾರರೆಂದು ನಮಗೆ ತೋರಿಸು. ನಿನ್ನ ಕೆಲಸವೇನು? ಎಲ್ಲಿಂದ ಬಂದೆ? ನಿನ್ನ ದೇಶ ಯಾವುದು? ನೀನು ಯಾವ ಜನಾಂಗದವನು?” ಎಂದು ಪ್ರಶ್ನಿಸಿದರು.
9 He answered, "I am a Hebrew, and I fear our Father, the Father of heaven, who made the sea and the dry land." ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.
10 Then the men were terrified and said, "What have you done?" For they knew he was fleeing from our Father's presence, because he had told them. ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.
11 Then they said to him, "What should we do to you to calm the sea for us?"—for the sea grew stormier and stormier. ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.
12 He told them, "Lift me up and throw me into the sea, and it will calm for you. I know this great storm came on you because of me." ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.
13 Instead the men rowed hard to reach land, but could not, for the sea grew wilder and wilder against them. ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು.
14 So they cried out to our Father: "Please, God, don't let us die for taking this man's life. Don't hold us guilty of innocent blood, for you have done as you pleased." ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.
15 Then they picked Jonah up and hurled him into the sea, and the raging sea grew calm. ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.
16 The men then feared our Father greatly, offered a sacrifice to our Father, and made vows. ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.
17 Now our Father appointed a great fish to swallow Jonah, and Jonah was in the belly of the fish three days and three nights. ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]